ಬೆಳಗಾವಿ:ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಮಕ್ಕಳು ಅಂಗಳದಲ್ಲಿನ‌ ಹೂ ಕಿತ್ತರು ಎಂಬ ಕಾರಣಕ್ಕೆ ಮನೆಯ ಮಾಲೀಕ ಅಂಗನವಾಡಿ‌ ಸಹಾಯಕಿಯ ಮೂಗನ್ನೇ ಕತ್ತರಿಸಿ ಅಟ್ಟಹಾಸ ಮೆರೆದಿರುವ ಘಟನೆ ಬೆಳಗಾವಿ ತಾಲ್ಲೂಕಿನ ಬಸುರ್ಪೆ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ(50) ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈವರೆಗೆ ಅರೋಪಿ ಕಲ್ಯಾಣಿ ಮೋರೆಯನ್ನು ಬಂಧಿಸದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಇದನ್ನೂ ಓದಿ:ಅಫ್ಘಾನಿಸ್ತಾನದಲ್ಲಿ ಎರಡು ಬಾರಿ ಕಂಪಿಸಿದ ಭೂಮಿ; ಭಾರತದಲ್ಲೂ ನಡುಗಿದ ಭೂಮಿ
ಅಂಗನವಾಡಿ ಮಕ್ಕಳು ಆಟವಾಡುತ್ತ ಪಕ್ಕದಲ್ಲೇ ಇರುವ ಮನೆಯ ಆವರಣದಲ್ಲಿ ಬೆಳೆಯಲಾಗಿದ್ದ ಮಲ್ಲಿಗೆ ಹೂ ಕಿತ್ತಿದ್ದರು. ಇದರಿಂದ ಕೋಪಗೊಂಡು ಅಂಗನವಾಡಿ ಸಹಾಯಕಿಗೆ ಮನೆ ಮಾಲೀಕ ಕಲ್ಯಅಣಿ ಮೋರೆ ಕುಪಿತಗೊಂಡು ಸಹಾಯಕಿ ಸುಗಂಧಾ ಮೋರೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಆಕೆಯ ಮೂಗನ್ನೇ ಕತ್ತರಿಸಿದ್ದಾನೆ. ಮೂಗು ಬಹುಪಾಲು‌ ಭಾಗ ಕತ್ತರಿಸಿದ್ದರಿಂದ ಮಹಿಳೆಯ ಶ್ವಾಸಕೋಶಕ್ಕೆ‌ ರಕ್ತ‌ ಹೋಗಿದ್ದು, ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಕುಡಗೋಲು‌ ತೆಗೆದುಕೊಂಡು ಬಂದ ಆರೋಪಿ ಕಲ್ಯಾಣಿ ಏಕಾಏಕಿ‌ ಸುಗಂಧಾ ಅವರ ಮೇಲೆ ದಾಳಿ‌ ಮಾಡಿ ಅವರ‌ ಮೂಗು ಕತ್ತರಿಸಿದ ಎಂದು‌ ದೂರು‌ ನೀಡಲಾಗಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈವರೆಗೂ ಆರೋಪಿಯನ್ನು ಬಂಧಿಸಿಲ್ಲ. ಮಹಿಳೆಯರನ್ನ ಅಕ್ಕಾ ಅಂತಾ ಹೇಳುವ ಸಚಿವೆ ಈ ವರೆಗೂ ಆಸ್ಪತ್ರೆಗೆ ಬಂದಿಲ್ಲ. ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸಿ ಸಚಿವರು ಹೇಳಿದಂತೆ ನಡೆದುಕೊಳ್ಳಲಿ ಎಂದು ಸಂತ್ರಸ್ತೆಯ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + nineteen =
Remember me
