ಉಡುಪಿ:ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಬಿಸಿಲಿನಿಂದ ರಕ್ಷಣೆ ಪಡೆಯಲು ಆರೋಗ್ಯ ಇಲಾಖೆ ಜನರಿಗೆ ಸೂಚನೆಗಳನ್ನು ನೀಡುತ್ತಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಇದಕ್ಕೆ ಸಂಬಂಧಿಸಿದಂ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ಸಿಟಿ ಬಸ್​ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ತಾಪಮಾನ ಹೆಚ್ಚಾಗಿದ್ದ ಕಾರಣ ನಿಶಕ್ತಯಿಂದ ಬಳಲಿ ಬದಿಯಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ರಾಜ್ಯದ ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ಹವಾಮಾನ ಇಲಾಖೆ ನಾಲ್ಕು ದಿನಗಳ ಉಷ್ಣ ಮಾರುತದ ಆರೆಂಜ್ ಅಲರ್ಟ್​ ಘೋಷಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 15 =
Remember me
