ಮೈಸೂರು:ಜನ್ಮದಿನದ ಸಂಭ್ರಮದಲ್ಲಿದ್ದ ಮನೆಯೊಂದರಲ್ಲಿ ಅದೇ ದಿನ ಸಾವಿನ ಸೂತಕ ಆವರಿಸಿದೆ. ಅತ್ಯಂತ ದುರದೃಷ್ಟಕರ ಎಂದರೆ, ಜನ್ಮದಿನದ ಸಂತೋಷದಲ್ಲಿದ್ದ ವ್ಯಕ್ತಿ ಅದೇ ದಿನ ಸಾವಿಗೀಡಾಗಿದ್ದಾನೆ. ಮೈಸೂರಿನ ತಿ. ನರಸೀಪುರ ತಾಲೂಕಿನಲ್ಲಿ ಇಂಥದ್ದೊಂದು ದುರಂತ ಸಂಭವಿಸಿದೆ.
ಮೂಗೂರು ನಿವಾಸಿ ಮನು (28) ಜನ್ಮದಿನದಂದೇ ಸಾವಿಗೀಡಾದ ವ್ಯಕ್ತಿ. ತನ್ನ ಹುಟ್ಟುಹಬ್ಬದ ಪ್ರಯುಕ್ತ ಇಂದು ತಮ್ಮನ ಮನೆಗೆ ಸಿಹಿ ವಿತರಿಸಲು ಮನು ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬೈಕ್​ನಲ್ಲಿ ತಿ.ನರಸೀಪುರ ತಾಲೂಕಿನ ಹಳೇ ಕೆಂಪಯ್ಯನ ಹುಂಡಿ ಬಳಿ ಹೋಗುತ್ತಿದ್ದಾಗ ಮನು ತಲೆ ಮೇಲೇ ಮರ ಬಿದ್ದಿದೆ.
ಗಂಭೀರವಾಗಿ ಗಾಯಗೊಂಡ ಮನು ಸ್ಥಳದಲ್ಲೇ ಸಾವಿಗೀಡಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಿ. ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ತಿ. ನರಸೀಪುರ ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್​ ಕೃಷ್ಣಪ್ಪ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಸ್ಕರ್​ ಪ್ರಶಸ್ತಿ 2022: ಚೊಚ್ಚಲ ಆಸ್ಕರ್​ ಪ್ರಶಸ್ತಿ ಗೆದ್ದ ನಟ ವಿಲ್​ ಸ್ಮಿತ್, ವಿಜೇತರ​ ಸಂಪೂರ್ಣ ಪಟ್ಟಿ ಇಲ್ಲಿದೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 10 =
Remember me
