ಬೆಂಗಳೂರು:ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು ಹತ್ಯೆ ಹಿಂದಿನ ಅಸಲಿ ಕಹಾನಿ ಬಯಲಾಗಿದೆ. ವಿಚಿತ್ರ ಎಂದರೆ ಈ ಪ್ರಕರಣದಲ್ಲಿ ಇಬ್ಬರೂ ಹೊಡೆದಾಡಿಕೊಂಡಿಲ್ಲ.
ದ್ವಿಚಕ್ರ ವಾಹನದಲ್ಲಿದ್ದ ಹೇಮಂತ್ ಹಾಗೂ ಸ್ನೇಹಿತನ ಜೊತೆಗೆ ಜಗಳಕ್ಕೆ ಜಗದೀಶ್ ಎನ್ನುವಾತ ಬಂದಿದ್ದಾನೆ. ಮದ್ಯದ ನಶೆಯಲ್ಲಿ ಈತ ಜಗಳಕ್ಕೆ ಇಳಿದಿದ್ದು ಪ್ರಾಣವನ್ನೇ ಕಳೆದುಕೊಂಡಿದ್ದಾನೆ.
ತನ್ನ ಪರಿಚಿತ ವ್ಯಕ್ತಿಯ ಜೊತೆಗೆ ಮಾತನಾಡುತ್ತಿದ್ದಾಗ ನಶೆಯಲ್ಲಿದ್ದ ಜಗದೀಶ್​ ಎನ್ನುವಾತ ದ್ವಿಚಕ್ರ ವಾಹನದ ಮೇಲೆ ಕುಳಿತಿದ್ದ ಹೇಮಂತ್​ ಹಾಗೂ ಹಿಂಬದಿಯಲ್ಲಿ ಕುಳಿತಿದ್ದ ಇನ್ನೊಬ್ಬ ವ್ಯಕ್ತಿಯ ಜೊತೆಗೆ ಜಗಳಕ್ಕೆ ಇಳಿದಿದ್ದಾನೆ. ಈ ವೇಳೆ ಕೋಪಗೊಂಡ ಹೇಮಂತ್, ಜಗದೀಶ್​ನ ಕಪಾಳಕ್ಕೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ಒಮ್ಮೆಲೆ ಕುಸಿದು ಬಿದ್ದ ಜಗದೀಶ್​, ಅಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
