ಕಾರವಾರ:ಕೋವಿಡ್​-19 ಸೋಂಕಿಗೆ ತುತ್ತಾಗಿ, ಸೂಕ್ತ ಚಿಕಿತ್ಸೆ ಪಡೆದುಕೊಂಡು ಗುಣವಾದರೂ ಜನರು ಆ ವ್ಯಕ್ತಿಗಳನ್ನು ಕೀಳಾಗಿ ಕಾಣುವುದನ್ನು ನಿಲ್ಲಿಸುತ್ತಿಲ್ಲ. ಸೋಂಕಿಗೆ ತುತ್ತಾದ ಸಂದರ್ಭದಲ್ಲೇ ಸೋಂಕಿತರನ್ನು ಕೀಳಾಗಿ ಕಾಣಲಾಗುತ್ತದೆ. ಇದು ಸೇರಿ, ತನ್ನಿಂದಾಗಿ ಬೇರೆಯವರಿಗೆ ತೊಂದರೆ ಆಯಿತಲ್ಲ ಎಂದು ಮಾನಸಿಕವಾಗಿ ಕುಗ್ಗಿರುತ್ತಾರೆ. ಗುಣವಾಗಿ ಬಂದ ನಂತರದಲ್ಲೂ ಇದೇ ರೀತಿಯ ವರ್ತನೆ ತೋರುವುದರಿಂದ ಮಾನಸಿಕವಾಗಿ ಮತ್ತಷ್ಟು ಘಾಸಿಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುವಂತ ಸಾಧ್ಯತೆ ಇರುತ್ತದೆ.
ಕಾರವಾರದಲ್ಲಿ ಕೂಡ ಇದೇ ರೀತಿ ಆಗಿದ್ದು, ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರವಾಡ ನಿವಾಸಿ ರತ್ನಾಕರ ನಾಯ್ಕ (42) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.
ಇದನ್ನೂ ಓದಿ:ಹಿನ್ನೆಲೆ ಡಾನ್ಸರ್​ಗಳ ಖಾತೆಗೆ ಹಣ ವರ್ಗಾವಣೆ ಮಾಡಿದ ಕತ್ರಿನಾ ಕೈಫ್
ಒಂದು ತಿಂಗಳ ಹಿಂದೆ ರತ್ನಾಕರ ನಾಯ್ಕ ಕೋವಿಡ್​-19 ಸೋಂಕಿಗೆ ತುತ್ತಾಗಿದ್ದರು. ಸೂಕ್ತ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿ ಮನೆಗೆ ಮರಳಿದ್ದರು. ಆದರೂ ಮನೆಯವರು ಸೇರಿ, ಅಕ್ಕಪಕ್ಕದವರು ಯಾರು ಕೂಡ ಇವರೊಂದಿಗೆ ಸರಿಯಾಗಿ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ಅವರು ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾರವಾರ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹಿನ್ನೆಲೆ ಡಾನ್ಸರ್​ಗಳ ಖಾತೆಗೆ ಹಣ ವರ್ಗಾವಣೆ ಮಾಡಿದ ಕತ್ರಿನಾ ಕೈಫ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − five =
Remember me
