ತಿರುಪತಿ:ಜಲಪಾತದಲ್ಲಿ ಈಜಲು ಹೋಗಿ ಯುವಕನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ತಿರುಪಪತಿ ಬಳಿ ಇರುವ ತಲಕೋನಾ ಜಲಪಾತದಲ್ಲಿ ನಡೆದಿದೆ.
ಮೃತರನ್ನು ಸುಮಂತ್​(22) ಎಂದು ಗುರುತಿಸಲಾಗಿದ್ದು, ಮಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಚೆನ್ನೈನಲ್ಲಿರುವ ರಾಜೀವ್​ ಗಾಂಧಿ ವಿಶ್ವವಿದ್ಯಾಲಯದಲ್ಲಿ ಎಂಎಸ್​ಸಿ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ವರದಿಯಾಗಿದೆ.
ಸುಮಂತ್​ ಸ್ನೇಹಿತರ ಜೊತೆ ತಿರುಒತಿ ಬಳಿ ಇರುವ ತಲಕೋನ ಜಲಪಾತಕ್ಕೆ ಬಂದಿದ್ದಾರೆ. ಈ ವೇಳೆ ಅವರು ನೀರಿಗೆ ಧುಮುಕುತ್ತಿರುವ ವಿಡಿಯೋವನ್ನು ಮೊಬೈಲ್​ ಫೋನಿನಲ್ಲಿ ಚಿತ್ರೀಕರಿಸುವಂತೆ ಹೇಳಿದ್ದಾರೆ. ಅದರಂತೆ ಸ್ನೇಹಿತರು ಕೂಡ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ:ಬೈಕ್​ ಅಪಘಾತದ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ; ಐವರ ಸ್ಥಿತಿ ಗಂಭೀರ
ನೀರಿಗೆ ಧುಮುಕಿ ತುಂಬಾ ಸಮಯ ಕಳೆದರೂ ಸಹ ಸುಮಂತ್​ ಮೇಲೆ ಬಾರದಿರುವುದನ್ನು ಗಮನಿಸಿದ ಸ್ನೇಹಿತರು ಕೂಡಲೇ ಹತ್ತಿರದ ಪೊಲೀಸ್​ ಠಾಣೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗೆ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಸುಮಂತ್​ ತಲೆಯನ್ನು ಬಿಡಿಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಕಳೆದ ಕೆಲ ತಿಂಗಳುಗಳ ಅವಧಿಯಲ್ಲಿ ತಲಕೋನ ಜಲಪಾತದಲ್ಲಿ ನಡೆದ ಮೂರನೇ ಅವಘಡ ಇದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 7 =
Remember me
