ಮುಳ್ಳೂರು:ಕುಡಿದ ಮತ್ತಿನಲ್ಲಿ ಆಕಸ್ಮಿಕವಾಗಿ ಆ್ಯಸಿಡ್ ಸೇವಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ:ಮತ್ತೊಂದು ಅಮಾನವೀಯ ಘಟನೆ: ಬೈಕ್​​ನ​ ಹಿಂಬದಿಗೆ ಮಂಚ ಕಟ್ಟಿ ಯುವಕನ ಮೃತದೇಹ ಹೊತ್ತೊಯ್ದ ಕುಟುಂಬಸ್ಥರುಸಿದ್ದರಾಜು (40) ಎಂಬಾತನೇ ಮೃತದುರ್ದೈವಿಯಾಗಿದ್ದು, ಭಾನುವಾರದಂದು ಕುಡಿಯುವ ನೀರು ಎಂದು ತಪ್ಪಾಗಿ ಶೌಚಾಲಯ ಸ್ವಚ್ಛಗೊಳಿಸಲು ಬಳಸಿದ ಆ್ಯಸಿಡ್​​ನ್ನು ಸೇವಿಸಿದ್ದಾನೆ. ಕೆಲ ಹೊತ್ತಿನ ಬಳಿಕ ತೀವ್ರವಾದ ನೋವಿನಿಂದ ನರಳುತ್ತಿದ್ದ ಆತನ ಕಿರುಚಾಟವನ್ನು ಕೇಳಿ ಮನೆಯವರು ಹಾಗೂ ಗ್ರಾಮಸ್ಥರು ಸಹಾಯಕ್ಕಾಗಿ ಧಾವಿಸಿದ್ದು ಕೂಡಲೇ ಆತನನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆದರೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಸಿದ್ದರಾಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + one =
Remember me
