ಬೆಂಗಳೂರು:ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಬಳಸಿಕೊಂಡು ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ಹಾವೇರಿಯ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ ಹೊಸಳ್ಳಿ ಎಂಬಾತ ಬಂಧಿತ. ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ತನಗೆ ಪರಿಚಯವಿದ್ದು, ಅವರ ಮೂಲಕ ಪ್ರಭಾವ ಬೀರಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಈತ ಹಲವಾರು ಜನರಿಂದ ಹಣ ಪಡೆದಿದ್ದ ಎನ್ನಲಾಗಿದೆ. ಉತ್ತರ ಕರ್ನಾಟಕ ಮೂಲದ ನಿರುದ್ಯೋಗಿ ಯುವಕರೇ ಹೆಚ್ಚಾಗಿ ಈತನಿಂದ ವಂಚನೆಗೆ ಒಳಗಾಗಿದ್ದಾರೆ.
ಇದನ್ನೂ ಓದಿ:ಸಪ್ತಪದಿ ತುಳಿದ ಐದೇ ದಿನಕ್ಕೆ ಮದುಮಗ ಸಾವು, 20 ಜನರಿಗೆ ಕೋವಿಡ್​ ಸೋಂಕು!
ಸರ್ಕಾರದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಆಕಾಂಕ್ಷಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ನಂತರ ಫೋನ್ ಸಂಪರ್ಕಕ್ಕೂ ಸಿಗದೆ ತಲೆಮರೆಸಿಕೊಳ್ಳುತ್ತಿದ್ದ. ಈ ರೀತಿ ಮೋಸ ಹೋದ ಕೆಲವರು ಪೊಲೀಸರ ಮೊರೆ ಹೋಗಿದ್ದರು. ಈ ದೂರುಗಳ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಶಿವಕುಮಾರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆತನ ಬಂಧನದ ಬಳಿಕ ಇದೇ ರೀತಿ ವಂಚಿಸಿದ, ಆದರೆ ದೂರು ದಾಖಲಾಗದ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ. ಲೋಕೋಪಯೋಗಿ ಇಲಾಖೆ ಮತ್ತಿತರ ಕಡೆ ಪಾವತಿಯಾಗದೆ ಬಾಕಿ ಉಳಿದ ಗುತ್ತಿಗೆದಾರರ ಬಿಲ್‌ಗಳನ್ನೂ ಮುಖ್ಯಮಂತ್ರಿ ಕುಟುಂಬದವರ ಮೂಲಕ ಪಾವತಿ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದಿರುವ ಘಟನೆಗಳೂ ಬಹಿರಂಗವಾಗಿವೆ. ಹೀಗೆ ಇನ್ನೂ ಎಷ್ಟು ಜನರಿಗೆ ವಂಚಿಸಿದ್ದಾನೆ ಎಂಬುದನ್ನು ತಿಳಿದುಕೊಳ್ಳಲು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಪೊಲೀಸರ ಡಬಲ್ ಸ್ಟ್ಯಾಂಡರ್ಡ್: ಹಿಂದುಗಳಿಗೊಂದು ನ್ಯಾಯ, ಮುಸ್ಲಿಮರಿಗೊಂದು ನ್ಯಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 11 =
Remember me
