ರಾಯಚೂರು:ಇಲ್ಲೊಬ್ಬನ ಸಾವು ತಾಯಿ, ಅಕ್ಕ, ಸೋದರಳಿಯನಿಂದಲೇ ಆಗಿದೆ. ಅದೂ ಅಂತಿಂಥ ಕೊಲೆಯಲ್ಲ. ಈ ಮೂವರು ಆತನ ತಲೆಗೆ ಕೊಡಲಿಯಿಂದ ಹೊಡೆದು, ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಲ್ಲದೆ ಶವವನ್ನು ಮನೆಯಿಂದ ಹೊರಗೆಸೆದಿದ್ದರು.
ಹೀಗೆ ಬರ್ಬರವಾಗಿ ತನ್ನವರಿಂದಲೇ ಕೊಲೆಯಾಗಿ ಹೋದ ವ್ಯಕ್ತಿಯ ಹೆಸರು ಅಮರೇಶ (43). ರಾಯಚೂರು ಜಿಲ್ಲೆ ಸಿರವಾರ ಪಟ್ಟಣದಲ್ಲಿ ಈ ಭೀಕರ ಕೊಲೆ ನಡೆದಿದೆ. ಈ ಕೊಲೆ ಸಂಬಂಧ ಅಮರೇಶನ ತಾಯಿ ಲಕ್ಷ್ಮೀ, ಅಕ್ಕ ನಿರ್ಮಲಾ ಹಾಗೂ ಸೋದರ ಅಳಿಯ ಸಂತೋಷ್​​ನನ್ನು ಸಿರವಾರ ಪೊಲೀಸರು ಬಂಧಿಸಿದ್ದಾರೆ. ಅಮರೇಶನ ಪತ್ನಿ ಸೌಭಾಗ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಕಾರು-ಬೈಕ್ ಭೀಕರ ಅಪಘಾತ; ಒಬ್ಬ ಸ್ಥಳದಲ್ಲೇ, ಇನ್ನೊಬ್ಬ ಆಸ್ಪತ್ರೆಯಲ್ಲಿ ಸಾವು
ಅಮರೇಶ ಮದ್ಯವ್ಯಸನಿಯಾಗಿದ್ದು, ಇಸ್ಪೀಟ್ ಚಟವನ್ನೂ ಹೊಂದಿದ್ದ. ಅಲ್ಲದೆ ಆತ ಕೆಲಸಕ್ಕೆ ಹೋಗದೆ ಪ್ರತಿದಿನ ಗಲಾಟೆ ಮಾಡುತ್ತಿದ್ದ. ಹೀಗೆ ಗಂಡ ದುಡಿಯಲ್ಲ ಎಂದು ಬೇಸತ್ತಿದ್ದ ಪತ್ನಿ ಸೌಭಾಗ್ಯ ತವರು ಮನೆಗೆ ಹೋಗಿದ್ದಳು. ಮದ್ಯ, ಇಸ್ಪೀಟ್ ಶೋಕಿಗೆ ಬಿದ್ದಿದ್ದ ಅಮರೇಶ್ ಬಹಳ ಸಾಲ ಮಾಡಿಕೊಂಡಿದ್ದ.
ಇದನ್ನೂ ಓದಿ:#MarriageStrike : ಮದುವೆ ವಿರುದ್ಧ ಪುರುಷರ ಅಭಿಯಾನ!
ಚಟಕ್ಕಾಗಿ ಮಾಡಿದ್ದ ಸಾಲವನ್ನು ತೀರಿಸುವ ಸಲುವಾಗಿ ಮನೆಯನ್ನು ಮಾರಾಟ ಮಾಡಲು ಅಮರೇಶ ಯತ್ನಿಸುತ್ತಿದ್ದ. ಹೀಗಾಗಿ ಈ ಸಂಬಂಧ ನಿನ್ನೆ ತಡರಾತ್ರಿ ಮನೆಯಲ್ಲಿ ಗಲಾಟೆಯಾಗಿತ್ತು. ಆಗ ತಾಯಿ, ಅಕ್ಕ, ಸೋದರಳಿಯ ಒಗ್ಗೂಡಿ ಅಮರೇಶನ ತಲೆಗೆ ಕೊಡಲಿಯಿಂದ ಹೊಡೆದು, ಕುತ್ತಿಗೆಗೆ ಹಗ್ಗ ಬಿಗಿದು ಕೊಂದು, ಶವ ಮನೆಯಿಂದ ಹೊರಕ್ಕೆ ಎಸೆದಿದ್ದರು. ಬಳಿಕ ಕೊಲೆಯ ಬಗ್ಗೆ ಅನುಮಾನ ಬಾರದಂತೆ ಮನೆಯವರು ವರ್ತಿಸಿದ್ದರು. ಬೆಳಗ್ಗೆ ಸ್ಥಳೀಯರು ನೀಡಿದ್ದ ಮಾಹಿತಿ ಮೇರೆಗೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ತನಿಖೆಗಿಳಿದಾಗ ಸತ್ಯಾಂಶ ತಿಳಿದುಬಂದು, ಆರೋಪಿಗಳನ್ನು ಬಂಧಿಸಿದ್ದಾರೆ.
‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!
ಹೆಣ್ಣೂರಲ್ಲೇ ಹೆಣ್ಣಿಗೆ ಅನ್ಯಾಯ!; ದೂರು ನೀಡಲು ಹೋದರೆ ಲಂಚ ಕೇಳಿದ, ಮಂಚಕ್ಕೂ ಕರೆದ ಪೊಲೀಸ್ ಇನ್​ಸ್ಪೆಕ್ಟರ್​…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − five =
Remember me
