ಮಂಡ್ಯ:ಸ್ನೇಹಿತರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ಕೊಲೆಯಲ್ಲಿ ಕೊನೆಗೊಂಡಿದೆ. ಆ ಮೂಲಕ ಸ್ನೇಹಿತರ ದಿನದಂದೇ ಸ್ನೇಹಿತನನ್ನೇ ಕೊಲೆ ಮಾಡಿದ ಪ್ರಕರಣವೊಂದು ನಡೆದಿದೆ. ಮಂಡ್ಯ ಜಿಲ್ಲೆಯಲ್ಲಿ ಈ ಕೊಲೆ ನಡೆದಿದೆ.
ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಜಯಂತ್ ಎಂಬಾತ ಕೊಲೆಗೀಡಾದ ವ್ಯಕ್ತಿ. ಈತನ ಸ್ನೇಹಿತ ಕೀರ್ತಿ ಕೊಲೆ ಆರೋಪಿ. ಇಂದು ಇವರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿತ್ತು. ಅದು ವಿಕೋಪಕ್ಕೆ ತೆರಳಿ ಕೊಲೆಯಲ್ಲಿ ಕೊನೆಗೊಳ್ಳುವ ಮಟ್ಟಕ್ಕೆ ತಲುಪಿದೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಜಗಳ ನಡೆಯುತ್ತಿದ್ದ ಸಂದರ್ಭದಲ್ಲಿ ಜಯಂತ್​ಗೆ ಕೀರ್ತಿ ಚಾಕುವಿನಿಂದ ಇರಿದಿದ್ದಾನೆ. ಇರಿತದ ತೀವ್ರತೆಗೆ ಭಾರಿ ರಕ್ತಸ್ರಾವಕ್ಕೀಡಾಗಿ ಜಯಂತ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಕೆರೆಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಮದುವೆಯಾಗುವುದಾಗಿ ಸಂಪರ್ಕ ಬೆಳೆಸಿ ವಂಚಿಸಿದ ಉದ್ಯಮಿ?: ನಟಿಯಿಂದ ಪೊಲೀಸರಿಗೆ ದೂರು

2000 ರೂ. ನೋಟು ಹಿಂಪಡೆ ವಿಚಾರ: ಆರ್​ಬಿಐನಿಂದ ಮತ್ತೆ ಮನವಿ; ಇಲ್ಲಿದೆ ವಿವರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 4 =
Remember me
