ಮಂಡ್ಯ:ವ್ಯಕ್ತಿಯೊಬ್ಬ ತನ್ನಿಬ್ಬರು ಮಕ್ಕಳನ್ನು ಕೊಂದು ಪತ್ನಿಯ ಮೇಲೂ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣದ ಮರಲಗಾಲ ಗ್ರಾಮದ ಬಳಿಯ ಫಾರ್ಮ್ ಹೌಸ್​ನಲ್ಲಿ ನಡೆದಿದೆ.
ಆದರ್ಶ (4), ಅಮೂಲ್ಯ (2) ತಂದೆಯಿಂದಲೇ ಕೊಲೆಯಾದ ದುರ್ದೈವಿ ಮಕ್ಕಳು. ಕಲಬುರಗಿ ಮೂಲದ ಶ್ರೀಕಾಂತ್ (29) ಮಕ್ಕಳನ್ನ ಕೊಂದು ಪತ್ನಿ ಕೊಲೆಗೂ ಯತ್ನಿಸಿರುವ ಪಾಪಿ. ಕೌಟುಂಬಿಕ ಕಲಹದಿಂದ ಬೇಸತ್ತು ಮೊದಲು ಪತ್ನಿ ಲಕ್ಷ್ಮಿಗೆ ಸುತ್ತಿಗೆಯಿಂದ ಹಲ್ಲೆ ಮಾಡಿದ್ದಾನೆ. ಸುತ್ತಿಗೆ ಏಟು ಬಿದ್ದ ತಕ್ಷಣ ಲಕ್ಷ್ಮೀ ಕೆಳಗೆ ಬಿದ್ದಿದ್ದಾಳೆ. ಬಳಿಕ ಮಕ್ಕಳಿಗೆ ಅದೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:ಸಿಕ್ಕಸಿಕ್ಕ ಲಿಂಕ್ ಮೇಲೆ ಒತ್ತಿದರೆ ಕನ್ನ ಗ್ಯಾರಂಟಿ: ಸೇವಾಸಿಂಧು ಹೆಸರಿನಲ್ಲಿ ನಕಲಿ ವೆಬ್​ಸೈಟ್/ಲಿಂಕ್ ಸೃಷ್ಟಿಸಿ ಹರಿಬಿಟ್ಟ ಸೈಬರ್ ಕಳ್ಳರು
ಲಕ್ಷ್ಮೀಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಸರಸ್ವತಿಪುರಂ ಬಡಾವಣೆಯಲ್ಲಿ ಜೋಡಿ ಕೊಲೆಯಾಗಿದೆ. ಮೃತರನ್ನು ವೆಂಕಟೇಶ (75) ಹಾಗೂ ಷಣ್ಮುಗ (65) ಎಂದು ಗುರುತಿಸಲಾಗಿದೆ. ಇಬ್ಬರು ಮಿಸ್ಬಾ ಶಾಮಿಲ್‌ನಲ್ಲಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದರು. ಕೊಲೆ ಕಾರಣ ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೈಡೆನ್​ ಭೋಜನಕೂಟದಲ್ಲಿ ಬಗೆ ಬಗೆಯ ಖಾದ್ಯ: ಪ್ರಧಾನಿ ಮೋದಿಗಾಗಿ ಸಿದ್ಧವಾದ ಊಟ ಮೆನು ಹೀಗಿದೆ…

ಮಕ್ಕಳ ಬ್ಯಾಗ್​ಗೆ ಹಗುರಯೋಗ: 1ನೇ ಕ್ಲಾಸ್​ಗೆ 2 ಕೆಜಿ ಒಳಗಿರಬೇಕು; 10ನೇ ಕ್ಲಾಸ್​ಗೆ ಗರಿಷ್ಠ 5 ಕೆಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 14 =
Remember me
