ಚಾಮರಾಜನಗರ:1999ರಲ್ಲಿ ಉಪೇಂದ್ರ ನಟಿಸಿ, ನಿರ್ದೇಶಿಸಿದ ಉಪೇಂದ್ರ ಚಿತ್ರದ ಏನಿಲ್ಲ ಏನಿಲ್ಲ ಹಾಡು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಇದೀಗ ಈ ಹಾಡಿನಿಂದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಇತ್ತೀಚಿನ ದಿನಗಳಲ್ಲಿ ಕರಿಮಣಿ ಮಾಲೀಕ ನೀನಲ್ಲ ಹಾಡಿಗೆ ರೀಲ್ಸ್​ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಇದೀಗ ಕರಿಮಣಿ ಮಾಲೀಕ ನೀನಲ್ಲ ಎಂದು ಪತ್ನಿ ರೀಲ್ಸ್​ ಮಾಡಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿಜಿ ಪಾಳ್ಯದಲ್ಲಿ ನಡೆದಿದೆ.
ಮೃತರನ್ನು ಕುಮಾರ್​ (33) ಎಂದು ಗುರುತಿಸಲಾಗಿದ್ದು, ಇವರ ಪತ್ನಿ ರೂಪಾ ಕೆಲ ದಿನಗಳ ಹಿಂದೆ ಸಹೋದರಿ ಹಾಗೂ ಸೋದರ ಮಾವನ ಜೊತೆಗೆ ಕರಿಮಣಿ ಮಾಲೀಕ ನೀನಲ್ಲ ಎಂದು ರೀಲ್ಸ್​ ಮಾಡಿದ್ದರು. ಇದೇ ವಿಚಾರವಾಗಿ ದಂಪತಿಗಳ ನಡುವೆ ಜಗಳವೂ ಸಹ ಆಗಿತ್ತು. ಪತ್ನಿಯ ರೀಲ್ಸ್​ ನೋಡಿ ಕುಮಾರ್​ ಸ್ನೇಹಿತರು ಅತನನ್ನು ರೇಗಿಸಿದ್ದು, ಇದರಿಂದ ಮನನೊಂದಿದ್ದ ಕುಮಾರ್​ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಹನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
