ಬೆಂಗಳೂರು:ಚಲಿಸುತ್ತಿದ್ದ ಕಾರಿನ ಮೇಲೆ ವ್ಯಕ್ತಿಯೋರ್ವ ಅನುಮಾಸ್ಪದ ರೀತಿಯಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಹೈಗ್ರೌಂಡ್ಸ್​ ಪೊಲೀಸ್​ ಠಾಣೆ ವ್ಯಾಪ್ತಿಯ ವಿಂಡ್ಸರ್​ ಮ್ಯಾನರ್​ ಬ್ರಿಡ್ಜ್ ಬಳಿ ನಡೆದಿದೆ.
ವಿಂಡ್ಸರ್​ ಮ್ಯಾನರ್​ ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ವ್ಯಕ್ತಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಕರಿಮಣಿ ಮಾಲೀಕ ಯಾರೆಂದು ರಿವೀಲ್​ ಮಾಡಿದ ದೀಪಿಕಾ ದಾಸ್; ಸೀಕ್ರೆಟ್​ ಮದುವೆಗೆ ಕಾರಣ ಹೀಗಿದೆ
ಮೃತ ವ್ಯಕ್ತಿಯ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಸುಮಾರು 35 ರಿಂದ 40 ವರ್ಷ ಆಸುಪಾಸಿನವರಾಗಿದ್ದು, ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದರಾ ಅಥವಾ ಆತ್ಮಹತ್ಯೆಗೆ ಯತ್ನಿಸಿದ್ದಾರಾ ಎಂಬುದು ತನಿಖೆ ಬಳಿಕ ಬೆಳಕಿಗೆ ಬರಲಿದೆ.
ಸುದ್ದಿ ಮೂಲಗಳ ಪ್ರಕಾರ ಚಲಿಸುತ್ತಿದ್ದ ರೈಲಿನಿಂದ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಯುವತಿ ಚಲಾಯಿಸುತ್ತಿದ್ದ ಕಿಯಾ ಸಾನೆಟ್ ಕಾರು ಇದಾಗಿದ್ದು, ಬಿದ್ದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾನೆ. ಸದ್ಯ ಮೃತ ವ್ಯಕ್ತಿಯ ಹಿನ್ನೆಲೆಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 4 =
Remember me
