ಬೆಂಗಳೂರು:ಈ ಕಿರಾತಕ ತನ್ನ ಪ್ರೇಯಸಿ ಯ ಹುಟ್ಟುಹಬ್ಬವನ್ನು ಗಡದ್ದಾಗಿ ಆಚರಿಸಿದ್ದಾನೆ. ನಂತರ ಅದೇನಾಯ್ತೋ ಗೊತ್ತಿಲ್ಲ, ಒಮ್ಮೆಲೆ ಚಾಕು ತೆಗೆದು ಕುತ್ತಿಗೆ ಕೊಯ್ದು ತನ್ನ ಪ್ರೇಯಸಿಯ ಹತ್ಯೆ ಮಾಡಿದ್ದಾನೆ! ಈ ವಿಲಕ್ಷಣ ಘಟನೆ ನಡೆದದ್ದು ಬೆಂಗಳೂರಿನ ಲಗ್ಗೆರೆಯಲ್ಲಿ. ಮೃತ ಯುವತಿಯನ್ನು ನವ್ಯಾ ಎಂದು ಗುರುತಿಸಲಾಗಿದ್ದು ಆರೋಪಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ.
ಮೃತ ಮಹಿಳೆ ನವ್ಯಾ, ಪೊಲೀಸ್ ಇಲಾಖೆಗೆ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್ ಆಗಿ ಕರ್ತವ್ಯನಿರ್ವಹಿಸುತ್ತಿದ್ದರು. ಪ್ರಶಾಂತ್ ಹಾಗೂ ನವ್ಯಾ ಇವರಿಬ್ಬರೂ ಕನಕಪುರ ಮೂಲದ ದೂರ ಸಂಬAಧಿಕರಾಗಿದ್ದು ಕಳೆದ ಆರು ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಳೆದ ಮಂಗಳವಾರ ನವ್ಯಾ ಬರ್ತಡೇ ಇತ್ತು. ಅಂದು ಬ್ಯುಸಿ ಇದ್ದೇನೆಂದು ಹೇಳಿದ್ದ ಪ್ರಶಾಂತ್ ನಿನ್ನೆ ಬರ್ತಡೇ ಸೆಲೆಬ್ರೇಷನ್ ಪ್ಲಾನ್ ಮಾಡಿಕೊಂಡಿದ್ದರು. ಅದರಂತೆ ನಿನ್ನೆ ರಾತ್ರಿ ಬರ್ತಡೇ ಸೆಲೆಬ್ರೇಷನ್ ಮಾಡುವುದಕ್ಕೆ ಪ್ರಶಾಂತ್ ಸಿದ್ಧತೆ ಮಾಡಿಕೊಂಡಿದ್ದ.

ಅದರAತೆ ರಾತ್ರಿ ಕೇಕ್ ಕಟ್ ಮಾಡಿ ಕೇಕ್ ತಿನ್ನಿಸಿದ್ದ. ತಿನ್ನಿಸಿದ ಬಳಿಕ ಹರಿತವಾದ ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾನೆ ಈ ಕಿರಾತಕ! ಇದೀಗ ಮೃತ ಯುವತಿಯ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನವ್ಯಾ ಇತ್ತೀಚೆಗೆ ಬೇರೆಯವರ ಜೊತೆ ಚಾಟಿಂಗ್ ಮಾಡ್ತಾ ಇದ್ದಳು ಅಂತ ಅನುಮಾನ ಈ ಪ್ರಶಾಂತ್‌ಗೆ ಶುರುವಾಗಿದೆ. ಇದೇ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ಆಗುತ್ತಿತ್ತು ಎನ್ನಲಾಗಿದೆ. ಇದೇ ಅನುಮಾನದ ಮೇಲೆ ಬರ್ತಡೇ ಆಚರಿಸಿ ಬಳಿಕ ಕೊಲೆ ಮಾಡಿದ್ದಾನೆ ಈ ಪಾಪಿ ಪ್ರಶಾಂತ್. ನಿನ್ನೆ ಸಂಜೆ ನಾಲ್ಕು ಗಂಟೆಗೆ ಆರೋಪಿ ಕೊಲೆಮಾಡಿದ್ದಾನೆ ಎಂದು ಹೇಳಲಾಗಿದ್ದು ರಾತ್ರಿ ಒಂಭತ್ತು ಗಂಟೆಗೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂದರ್ಭ ಈ ಪ್ರಶಾಂತ್ ಐದು ಗಂಟೆಗಳ ಕಾಲ ಶವದ ಜೊತೆಯೇ ಇದ್ದ ಎನ್ನಲಾಗಿದೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + one =
Remember me
