ಬೆಂಗಳೂರು :ಮದ್ಯ ಸೇವಿಸಲು ಹಣ ನೀಡಲು ನಿರಾಕರಿಸಿದ ಕಾರಣಕ್ಕೆ ಪತ್ನಿ ತಲೆ ಮೇಲೆ ಸೀಮೆಂಟ್​ ಇಟ್ಟಿಗೆ ಎತ್ತಿಹಾಕಿ ಹತ್ಯೆ ಮಾಡಿ ಪತಿ ಪರಾರಿಯಾಗಿದ್ದಾನೆ. ಹೆಣ್ಣೂರಿನಲ್ಲಿ ಶೆಡ್​ನಲ್ಲಿ ನೆಲೆಸಿದ್ದ ಕೂಲಿ ಕಾರ್ಮಿಕೆ ಮಲ್ಲಿಕಮ್ಮ ಮೃತರು. ಆರೋಪಿ ವೀರೇಶ್​ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಲಕ್ಷ್ಮೀಪುರ ಮೂಲದ ಮಲ್ಲಿಕಮ್ಮ ಅವರ ಮೊದಲ ಪತಿ ಮೃತಪಟ್ಟಿದ್ದ. ಆನಂತರ ಕೂಲಿ ಅರಸಿ ಬೆಂಗಳೂರಿಗೆ ಬಂದಿದ್ದ ಆಕೆ, ವೀರೇಶ್​ ಎಂಬುವನ ಜೊತೆ ಮದುವೆಯಾಗಿ ಹೆಣ್ಣೂರಿನ ಶೆಡ್​ನಲ್ಲಿ ನೆಲೆಸಿದ್ದಳು. ವೀರೇಶ್​ಗೆ ಕುಡಿತದ ಚಟವಿದ್ದು, ಮದ್ಯ ಸೇವನೆಗೆ ಹಣ ಕೊಡುವಂತೆ ಪದೇ ಪದೇ ಮಲ್ಲಿಕಮ್ಮ ಜೊತೆ ಜಗಳ ಮಾಡುತ್ತಿದ್ದ. ಕೂಲಿ ಮಾಡಿದ ಹಣವನ್ನು ಕುಡಿದು ಹಾಳು ಮಾಡುತ್ತಾನೆ ಎಂಬ ಕಾರಣಕ್ಕೆ ಆಕೆ ಹಣ ನೀಡಲು ನಿರಾಕರಿಸುತ್ತಿದ್ದಳು ಎನ್ನಲಾಗಿದೆ.
ಇದನ್ನೂ ಓದಿ:ಡೇಟಿಂಗ್​ ಆ್ಯಪ್​ ಮೂಲಕ ಪುಸಲಾಯಿಸಿ ಕರೆದರು, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್​ ಮಾಡಿದರು!
ಜೂನ್​ 10 ರಂದು ಇದೇ ರೀತಿ ಹಣ ಕೇಳಿದ್ದಕ್ಕೆ ನಿರಾಕರಿಸಿದಳು ಎಂಬ ಕೋಪಕ್ಕೆ ಶೆಡ್​ನಲ್ಲಿ ಮಲ್ಲಿಕಮ್ಮನ ತಲೆಯ ಮೇಲೆ ಸೀಮೆಂಟ್​ ಇಟ್ಟಿಗೆಯನ್ನು ಎತ್ತಿಹಾಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಕ್ಕಪಕ್ಕದ ಮನೆಯವರು ನೋಡಿ ಪೊಲೀಸರಿಗೆ ವಿಷಯ ತಿಳಿಸಿದಾಗ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪತಿಗೆ ಕರೆ ಮಾಡಿದಾಗ ಸಂಪರ್ಕಕ್ಕೆ ಸಿಕ್ಕಿಲ್ಲ. ಕೊನೆಗೆ ಮಹಿಳೆಯ ಸಂಬಂಧಿಯನ್ನು ಕರೆ ಮಾಡಿ ವಿಚಾರಿಸಿದಾಗ ಮಾಹಿತಿ ಲಭ್ಯವಾಗಿದೆ. ಹಣದ ವಿಚಾರಕ್ಕೆ ವೀರೇಶ್​ ಕೊಲೆ ಮಾಡಿರುವ ಸಾಧ್ಯತೆ ಇರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆತನ ಬಂಧನಕ್ಕೆ ಬಲೆಬೀಸಿದ್ದು, ಹೆಣ್ಣೂರು ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಅಕ್ರಮ ವಾಸದೊಂದಿಗೆ ಕಿಡ್ನಿ ಮಾರಾಟದ ಸೋಗಲ್ಲಿ ವಂಚನೆ : ನೈಜೀರಿಯಾ ಪ್ರಜೆ ಪೊಲೀಸರ ಬಲೆಗೆ

ಸಂಬಳ ಹೆಚ್ಚಿಸುತ್ತಿಲ್ಲ, ಮನೆ ಸಂಭಾಳಿಸಲು ಆಗುತ್ತಿಲ್ಲ ಎಂದು ಕಾರ್ಮಿಕ ಆತ್ಮಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
