ವಿಜಯಪುರ:ಹೊಲಕ್ಕೆ ಹೋಗಿದ್ದ ಯುವಕನೊಬ್ಬ ಬರ್ಬರವಾಗಿ ಕೊಲೆಗೀಡಾಗಿದ್ದು, ದುಷ್ಕರ್ಮಿಗಳು ಆತನನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಾಳಸಂಗಿ ಗ್ರಾಮದಲ್ಲಿ ಈ ಕೊಲೆ ನಡೆದಿದೆ.
ಸಿದ್ಧಾರೂಢ ಮರಾಠಿ (22) ಎಂಬಾತ ಕೊಲೆಯಾದ ಯುವಕ. ಈತ ಹೊಲಕ್ಕೆ ಹೋಗಿಬರುವುದಾಗಿ ಹೇಳಿಹೋಗಿದ್ದ. ಆದರೆ ಅಲ್ಲಿಯೇ ಈತ ಕೊಲೆಗೀಡಾಗಿದ್ದ. ಮೈತುಂಬಾ ಕೊಡಲಿ ಏಟುಗಳು ಬಿದ್ದಿದ್ದು, ಬರ್ಬರವಾಗಿ ಕೊಲೆ ಮಾಡಲಾಗಿದೆ. ಆದರೆ ಕೊಲೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದೆ. ಸ್ಥಳಕ್ಕೆ ಎಎಸ್​ಪಿ ರಾಮ ಅರಸಿದ್ಧಿ, ಡಿವೈಎಸ್​ಪಿ ಶ್ರೀಧರ ದೊಡ್ಡಿ ಭೇಟಿ ಪರಿಶೀಲಿಸಿದ್ದಾರೆ. ಇಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈತ ಶಾಲೆಯಲ್ಲಿ ಮಾಡಬಾರದ್ದನ್ನೆಲ್ಲ ಮಾಡ್ತಿದ್ದ; ಕೊನೆಗೂ ವಿಡಿಯೋ ವೈರಲ್​ ಆಗಿ ಅಮಾನತುಗೊಂಡ…

ನೀವು ಸಿಎಂ ಆಗೋದಾದ್ರೆ ಜೆಡಿಎಸ್‌ ಶಾಸಕರೆಲ್ಲ ಜೈ ಅಂತೀವಿ: ಶಾಸಕ ಎಚ್‌.ಡಿ. ರೇವಣ್ಣ ಕೊಟ್ರು ಆಫರ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 1 =
Remember me
