ಉಡುಪಿ:ಸಂಭ್ರಮದಲ್ಲಿರುವಾಗಲೇ ಇದ್ದಕ್ಕಿದ್ದಂತೆ ಶೋಕದ ವಾತಾವರಣ ಉಂಟಾದ ಅನೇಕ ಪ್ರಕರಣಗಳು ಈಗಾಗಲೇ ಹಲವು ನಡೆದಿವೆ. ಅಂಥದ್ದೇ ಮತ್ತೊಂದು ಪ್ರಕರಣ ನಡೆದಿದ್ದು, ವ್ಯಕ್ತಿಯೊಬ್ಬರು ಮೆಹಂದಿ ಕಾರ್ಯಕ್ರಮದ ಸಂಭ್ರಮದಲ್ಲಿದ್ದಾಗಲೇ ಸಾವಿಗೀಡಾಗಿದ್ದಾರೆ.
ಉಡುಪಿ ಜಿಲ್ಲೆಯ ಅಂಬಾಗಿಲು ಪುತ್ತೂರು ಬಳಿ ಇಂಥದ್ದೊಂದು ದುರಂತ ಸಂಭವಿಸಿದೆ. ಗಣಪತಿ ಆಚಾರ್ಯ ಎಂಬವರು ಸಾವಿಗೀಡಾದವರು. ಇವರು ಸಂಬಂಧಿಕರ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಮತ್ತೆ ಹಿಜಾಬ್ ಸದ್ದು; ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡದ್ದಕ್ಕೆ ಟಿ.ಸಿ. ಕೇಳಿದ ವಿದ್ಯಾರ್ಥಿನಿ
ಎಲ್ಲರೂ ಕುಣಿದು ಕುಪ್ಪಳಿಸಿ ಸಂಭ್ರಮಿಸುತ್ತಿರುವಾಗ, ಕುಣಿದು ದಣಿದು ಸುಸ್ತಾಗಿ ನಿಂತ ಇವರು ಹಾಗೇ ಅಲ್ಲಿ ಪಕ್ಕದಲ್ಲಿದ್ದ ಕುರ್ಚಿಯ ಮೇಲೆ ಕುಳಿತರು. ಕೆಲವೇ ಕ್ಷಣಗಳಲ್ಲಿ ಪಕ್ಕದಲ್ಲಿದ್ದ ಇನ್ನೊಬ್ಬರ ಒರಗುತ್ತ ಕೆಳಕ್ಕೆ ಬಿದ್ದಿದ್ದು, ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಇವರು ಸಾವಿಗೀಡಾಗಿದ್ದಾರೆ. ಹೃದಯಾಘಾತದಿಂದ ಸಾವಿಗೊಳಗಾಗಿದ್ದಾರೆ ಎನ್ನಲಾಗಿದೆ.
ಮದುವೆ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವುಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯ ಅಂಬಾಗಿಲು ಪುತ್ತೂರು ಬಳಿ ನಡೆದಿದೆ. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕೂಡಲೇ ತರಲಾಯಿತು. ಆದರೆ ಆಸ್ಪತ್ರೆಗೆ ತರುವಾಗಲೇ ಮೃತಪಟ್ಟಿದ್ದರು .pic.twitter.com/Gflvah2qOk— Vijayavani (@VVani4U)June 22, 2022
ಮದುವೆ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವುಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯ ಅಂಬಾಗಿಲು ಪುತ್ತೂರು ಬಳಿ ನಡೆದಿದೆ. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕೂಡಲೇ ತರಲಾಯಿತು. ಆದರೆ ಆಸ್ಪತ್ರೆಗೆ ತರುವಾಗಲೇ ಮೃತಪಟ್ಟಿದ್ದರು .pic.twitter.com/Gflvah2qOk
ದೀರ್ಘ ಕಾಲ ಗೈರಾಗಿದ್ದ ತಂದೆ ಕೆಲಸದಿಂದ ವಜಾ, ‘ಅಪ್ಪನಿಗೆ ಕೆಲ್ಸ ಕೊಡಿ’ ಎಂಬ ಪುತ್ರಿಯ ಕೋರಿಕೆಗೆ ಮರುಗಿ ಉದ್ಯೋಗ ಕೊಟ್ಟ ಅಧಿಕಾರಿ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × three =
Remember me
