ನೆಲಮಂಗಲ:ಕೌಟುಂಬಿಕ ಕಲಹದಿಂದ ನೊಂದಿದ್ದ ವ್ಯಕ್ತಿಯೊಬ್ಬ ಮದ್ಯದೊಂದಿಗೆ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಕೈಗಾರಿಕಾ ಪ್ರದೇಶದ ಬಳಿ ಈ ಘಟನೆ ನಡೆದಿದೆ.
ಮಾಗಡಿಯ ಸಿಡಿಗನಹಳ್ಳಿ ಮೂಲದ ಆನಂದ್ ಕುಮಾರ್ (39) ಆತ್ಮಹತ್ಯೆ ಮಾಡಿಕೊಂಡಿದ್ದ ವಿವಾಹಿತ. ತೋಟನಹಳ್ಳಿಯ ಹೆಂಡತಿ ಮನೆಯಲ್ಲೇ ವಾಸವಿದ್ದ ಆನಂದ್, ಕೌಟುಂಬಿಕ ಕಲಹದಿಂದ ತೀವ್ರವಾಗಿ ನೊಂದಿದ್ದರು. ಇದೇ ಕಾರಣಕ್ಕೆ ಅವರು ತ್ಯಾಮಗೊಂಡ್ಲು ಕೈಗಾರಿಕಾ ಪ್ರದೇಶದಲ್ಲಿ ಮದ್ಯದೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.
ತ್ಯಾಮಗೊಂಡ್ಲು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ಜಾತ್ರೆಗೆ ಸಾರ್ವಜನಿಕರಿಗಿಲ್ಲ ಪ್ರವೇಶ: ರಥೋತ್ಸವಕ್ಕೆ ಕರೊನಾ ಕರಿಛಾಯೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 15 =
Remember me
