ತುಮಕೂರು:ಮೊನ್ನೆಮೊನ್ನೆಯಷ್ಟೇ ಯಕ್ಷಗಾನ ಕಲಾವಿದರು ರಂಗಸ್ಥಳದಲ್ಲೇ ಕುಸಿದು ಬಿದ್ದು ಸಾವಿಗೀಡಾಗಿದ್ದರು. ಇಂದು ವ್ಯಕ್ತಿಯೊಬ್ಬರು ಮೈದಾನದಲ್ಲಿ ಆಡುತ್ತಿರುವಾಗ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ಆತಂಕವನ್ನು ಮೂಡಿಸಿದೆ.
ಬೆಂಗಳೂರು ಭುವನೇಶ್ವರಿ ನಗರ ನಿವಾಸಿ ರಮೇಶ್‌ಕುಮಾರ್ (36) ಎಂಬಾತ ಮೃತಪಟ್ಟ ವ್ಯಕ್ತಿ. ರಮೇಶ್‌ಕುಮಾರ್ ಹಾಗೂ ಅವರ ತಂಡ ಕ್ರಿಕೆಟ್ ಆಟಡಲೆಂದು ಪಟ್ಟಣದ ಹೊರ ವಲಯದ ಗಿರಿಗೌಡನಪಾಳ್ಯ ಮೈದಾನಕ್ಕೆ ಇಂದು ಬಂದಿದ್ದು, ಕ್ರಿಕೆಟ್ ಆಡುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಮಧ್ಯಾಹ್ನ ಸುಮಾರು 1.30ರ ಸುಮಾರಿಗೆ ರಮೇಶ್​ಕುಮಾರ್ ಬ್ಯಾಟಿಂಗ್ ಮಾಡಿ ರನ್​ಗಾಗಿ ಓಡುವ ವೇಳೆ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದರು. ಕೂಡಲೇ ಸಹ ಆಟಗಾರರು ರಕ್ಷಣೆಗೆ ಧಾವಿಸಿದ್ದರು. ಆದರೆ ಅಷ್ಟರಲ್ಲಿ ರಮೇಶ್​ಕುಮಾರ್ ಮೃತಪಟ್ಟಿದ್ದರು. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜು ವಿದ್ಯಾರ್ಥಿನಿಯರಿಗೂ ಹೆರಿಗೆ ರಜೆ ನೀಡಲು ಮುಂದಾದ ವಿಶ್ವವಿದ್ಯಾಲಯ; ಎಲ್ಲಿ, ಎಷ್ಟು ತಿಂಗಳು?

ರಾಯಚೂರಲ್ಲಿ ಪ್ರೇಮಿಗಳಿಬ್ಬರ ದೇಹ ಎರಡೆರಡು ಚೂರು; ಹಳಿಗೆ ತಲೆಯೊಡ್ಡಿ ಪ್ರಾಣ ಕಳ್ಕೊಂಡ ಲವರ್ಸ್, ಇಬ್ಬರ ರುಂಡವೂ ಕಟ್!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − six =
Remember me
