ಬೆಂಗಳೂರು:ಫ್ಲೈಓವರ್ ಮೇಲೆ ವ್ಯಕ್ತಿಯೊಬ್ಬ ಯುವತಿಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಲಾಯಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಈ ದೃಶ್ಯ ನೋಡಿದ ನೆಟ್ಟಿಗರು, ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರೇಮಿಗಳ ಹುಚ್ಚಾಟದ ವಿಡಿಯೋ ಬೆಂಗಳೂರು ಸಂಚಾರಿ ಪೊಲೀಸರ ಗಮನಕ್ಕೆ ಬಂದಿದ್ದು, ಸದ್ಯ ಇಬ್ಬರನ್ನೂ ಅಧಿಕಾರಿಗಳು ಇದೀಗ ಪತ್ತೆ ಹಚ್ಚಿದ್ದಾರೆ.
ಇದನ್ನೂ ಓದಿ:ಸುಬ್ರಹ್ಮಣ್ಯ ಠಾಣೆಗೆ ಸುಸಜ್ಜಿತ ಕಟ್ಟಡ : ಸ್ಥಳಾಂತರಕ್ಕೆ ದಿನಗಣನೆ: ಭರದಿಂದ ಸಾಗುತ್ತಿದೆ ಕಾಮಗಾರಿ
ಈ ಘಟನೆ ಯಾವ ದಿನ ನಡೆದಿದ್ದು ಎಂಬುದು ಸ್ಪಷ್ಟವಾಗಿಲ್ಲ. ಆದರೆ, ವಿಡಿಯೋ ವೈರಲ್ ಆದ ಬಳಿಕ ಪೊಲೀಸರ ಗಮನಕ್ಕೆ ಬಂದಿದೆ ಎನ್ನಲಾಗಿದೆ. ಯುವತಿ ಬೈಕ್ ಚಲಾಯಿಸುತ್ತಿರುವ ಯುವಕನ ತೊಡೆಯ ಮೇಲೆ ಕುಳಿತು ಸವಾರಿ ಮಾಡುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ. ಘಟನೆ ಉತ್ತರ ಬೆಂಗಳೂರಿನ ಹೆಬ್ಬಾಳದ ಮೇಲ್ಸೇತುವೆ ಮೇಲೆ ನಡೆದಿದೆ ಎಂದು ವರದಿಯಾಗಿದೆ.
ಬೆಂಗಳೂರು ಸಂಚಾರಿ ಪೊಲೀಸರು ಬೈಕ್‌ನ ನಂಬರ್ ಪ್ಲೇಟ್ ಮತ್ತು ಸಿಸಿಟಿವಿ ದೃಶ್ಯಗಳನ್ನು ಬಳಸಿ ಯುವಕ ಮತ್ತು ಯುವತಿಯನ್ನು ಪತ್ತೆ ಮಾಡಿದ್ದಾರೆ. ಈಗ ಅವರಿಬ್ಬರನ್ನು ಪತ್ತೆ ಮಾಡಿದ್ದೇವೆ. ಈ ಹಿಂದೆ ಮಾಡಿದ ಉಲ್ಲಂಘನೆಗಳ ಪಟ್ಟಿಯನ್ನು ಸಹ ನಾವು ಪತ್ತೆಹಚ್ಚಿದ್ದೇವೆ ಎಂದು ಬೆಂಗಳೂರಿನ ಸಂಚಾರ ಉತ್ತರ ವಿಭಾಗದ ಡಿಸಿಪಿ ಮಾಹಿತಿ ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).
‘ಆತನದು ಸ್ಟಾಪ್-ಸ್ಟಾರ್ಟ್ ಕರಿಯರ್’​! ವಿರಾಟ್​ ಕೊಹ್ಲಿ ವಿರುದ್ಧ ಮತ್ತೆ ಕಿಡಿಕಾರಿದ ಸುನಿಲ್ ಗವಾಸ್ಕರ್​, ಇದೆಲ್ಲಾ ನಿಮಗೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:16 − sixteen =
Remember me
