ಬೆಂಗಳೂರು:ಇಲ್ಲೊಬ್ಬ ಕೂಲಿ ಕಾರ್ಮಿಕ, ವಿಮಾನದಲ್ಲೂ ಬೀಡಿ ಸೇದಲು ಯತ್ನಿಸಿದ್ದಾನೆ. ತಿಳಿದೋ ತಿಳಿಯದೆಯೋ ಮಾಡಿದ ತಪ್ಪಿಗೆ ಈತ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಆತನನ್ನು ಮಂಗಳವಾರ ಬಂಧಿಸಿದ್ದಾರೆ.
ರಾಜಸ್ಥಾನ ರಾಜ್ಯದ ಎಸ್.ಪ್ರವೀಣ್ ಕುಮಾರ್ ಎನ್ನುವವರು ವಿಮಾನದಲ್ಲಿ ಬೀಡಿ ಸೇದಲು ಯತ್ನಿಸಿದ್ದು ಇದನ್ನು ಗಮನಿಸಿದ ವಿಮಾನದ ಸಿಬ್ಬಂದಿ ಆಕ್ಷೇಪಿಸಿದ್ದಾರೆ. ನಂತರ ಇವರ ವರ್ತನೆ ಬಗ್ಗೆ ಮೇಲಧಿಕಾರಿಗಳಿಗೆ ದೂರನ್ನು ನೀಡಿದ್ದಾರೆ.
ಅಸಲಿಗೆ ಈ ಕೂಲಿ ಕಾರ್ಮಿಕ, ರಾಜಸ್ಥಾನದಲ್ಲಿ ಸಣ್ಣಪುಟ್ಟಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಈತ, ಬೆಂಗಳೂರಿನಲ್ಲಿ ಸಂಬಂಧಿಯೊಬ್ಬರ ಅಂತ್ಯಸಂಸ್ಕಾರದ ಸಲುವಾಗಿ ಬಂಧುಗಳ ಜತೆಗೆ ಬಂದಿದ್ದ. ಜೈಪುರದಿಂದ ಆಕಾಸ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಗಳೂರಿಗೆ ಆತ ಹೊರಟಿದ್ದ. ಮುಂಜಾನೆ ಹೊತ್ತಿನಲ್ಲಿ ವಿಮಾನದಲ್ಲಿ ಬೀಡಿ ಸೇದಲು ಪ್ರವೀಣ್‌ ಯತ್ನಿಸಿದ್ದಾನೆ.
ತಕ್ಷಣ ಎಸ್‌ಎನ್‌ವಿ ವೈಮಾನಿಕ ಸಂಸ್ಥೆಯ ಅಧಿಕಾರಿ ವಿಜಯ್ ತಲ್ಲೂರು ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಮುಂಜಾನೆ 4 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರವೀಣ್‌ನನ್ನು ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ವಿವರಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 6 =
Remember me
