ಮಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಎರಡು ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ನ್ಯಾಯಾಲಯದಿಂದ ಈ ತೀರ್ಪು ನೀಡಲಾಗಿದೆ.
ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ. ಸುಳ್ಯ ನ್ಯಾಯಾಲಯದ ನ್ಯಾಯಾಧೀಶರಾದ ಸೋಮೇಶೇಖರ್ ಅವರು ಗಿರಿಧರ್ ರೈಗೆ 2 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್​ 2016ರಲ್ಲಿ ಇಂಧನ ಸಚಿವರಾಗಿದ್ದ ವೇಳೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತೀರ್ಪು ನೀಡಲಾಗಿದೆ.
ಗಿರಿಧರ್ ರೈ 2016ರ ಫೆ.28ರಂದು ಅಂದಿನ ಇಂಧನ ಸಚಿವ ಡಿ.ಕೆ.ಶಿವಕುಮಾರ್​ಗೆ ಕರೆ ಮಾಡಿ, ವಿದ್ಯುತ್ ಸಮಸ್ಯೆ ಹೇಳಿಕೊಂಡಿದ್ದರು. ಈ ಸಂದರ್ಭ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಡಿಕೆಶಿಯನ್ನು ಗಿರಿಧರ್ ರೈ ನಿಂದಿಸಿದ್ದರು ಎನ್ನಲಾಗಿದೆ.
ಈ ಬಗ್ಗೆ ಡಿ.ಕೆ.ಶಿವಕುಮಾರ್ ಅಂದಿನ ಮೆಸ್ಕಾಂ ಎಂಡಿ ಮೂಲಕ ಗಿರಿಧರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಕೇಸು ದಾಖಲಿಸಿಕೊಂಡ ಪೊಲೀಸರು ರಾತ್ರೋರಾತ್ರಿ ಗಿರಿಧರ್ ರೈಯನ್ನು ಬಂಧಿಸಿದ್ದರು.
ಕರ್ನಾಟಕದಲ್ಲಿ ಯುಪಿ ಮಾಡೆಲ್​; ರಾಜ್ಯದ 50 ವಿಧಾನಸಭಾ ಕ್ಷೇತ್ರಗಳಲ್ಲಿ ಸಂತರ ಸ್ಪರ್ಧೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
