ಚಿತ್ರದುರ್ಗ:ನೂತನ ಶಾಸಕರ ಸನ್ಮಾನವನ್ನು ನೋಡಲೆಂದು ಹೊರಟವ ಮಾರ್ಗಮಧ್ಯೆಯೇ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ಚಿತ್ರದುರ್ಗ ಪಟ್ಟಣದ ತುರುವನೂರು ರಸ್ತೆಯಲ್ಲಿ ಈ ಪ್ರಕರಣ ನಡೆದಿದೆ. ಇರಜನಟ್ಟಿ ನಿವಾಸಿ ನರಸಿಂಹಮೂರ್ತಿ (65) ಸಾವಿಗೀಡಾದವರು. ಇವರ ಜತೆಗಿದ್ದ ಬಸವರಾಜ್ (60) ಗಂಭೀರವಾಗಿ ಗಾಯಗೊಂಡಿದ್ದಾರೆ. ಈತ ಚಿತ್ರದುರ್ಗದ ವೈಶಾಲಿ ಪ್ರದೇಶದ ನಿವಾಸಿ. ಗಾಯಾಳುವನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರು ಪ್ರಯಾಣಿಸುತ್ತಿದ್ದ ಬೈಕ್​ಗೆ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ನೇತೃತ್ವದಲ್ಲಿ ಜಿಲ್ಲೆಯ ಐವರು ನೂತನ ಶಾಸಕರ ಸನ್ಮಾನ ಸಮಾರಂಭ ನೋಡಲು ಇವರು ಹೊರಟಿದ್ದರು. ಅಪಘಾತದ ಬಳಿ ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಚಿತ್ರದುರ್ಗ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಬೆಂಗಳೂರಲ್ಲಿ ಇದೇ ಭಾನುವಾರ ಕುಂದಾಪ್ರ ಕನ್ನಡ ಹಬ್ಬ: ಸಿಎಂ ಉಪಸ್ಥಿತಿ, ಸಂಭ್ರಮಕ್ಕೆ ಸ್ಟಾರ್ ಕಳೆ

ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 6 =
Remember me
