ಮಂಡ್ಯ:ಮನೆ ನಿರ್ಮಾಣಕ್ಕೆ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಅನುಮೋದನೆ ಕೊಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಮನವಿ ಸಲ್ಲಿಸಲಾಯಿತು.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆಂದು ಸರ್‌ಎಂವಿ ಕ್ರೀಡಾಂಗಣಕ್ಕೆ ಆಗಮಿಸಿದ ವೇಳೆ ಸಂಘದ ಸದಸ್ಯರು ಮನವಿ ಸಲ್ಲಿಸಿದರು. ನಗರದ ಹಾಲಹಳ್ಳಿ ಸ್ಲಂ ನಿವಾಸಿಗಳಿಗೆ 712 ಮನೆಗಳಿಗೆ ಗುದ್ದಲಿ ಪೂಜೆ ಮಾಡಿ ಮನೆ ಕಟ್ಟುವ ಕಾಮಗಾರಿಗೆ ಐದು ವರ್ಷ ಹಿಂದೆ ಚಾಲನೆ ನೀಡಲಾಯಿತು. ಈ ಪೈಕಿ 632 ಮನೆಗಳ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ. ಇನ್ನೂ 80 ಮನೆ ಕಟ್ಟಲು ನೀಲ ನಕ್ಷೆ ತಯಾರಿಸಿದ್ದು, ಜಿ+1 ಮಾದರಿ ನಿರ್ಮಾಣಕ್ಕೆ 1,35 ಲಕ್ಷ ರೂ ಅನುದಾನವಿದೆ. ಆದರೆ ಇದಕ್ಕೆ ಕೊಳಚೆ ನಿರ್ಮೂಲನಾ ಮಂಡಳಿಯ ಅನುಮೋದನೆಯಾಗಬೇಕು ಎಂದರು. ಸಂಘದ ಗೌರವ ಪೋಷಕ ಎಂ.ಬಿ.ಶ್ರೀನಿವಾಸ್, ಅಧ್ಯಕ್ಷ ಮುರುಗ, ಗೌರವಾಧ್ಯಕ್ಷ ಸೋಮಣ್ಣ, ಕಾರ್ಯಾಧ್ಯಕ್ಷ ಟಿ.ಆರ್.ಮುರಳಿ, ಕಾರ್ಯದರ್ಶಿ ಗುಂಡಣ್ಣ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + seven =
Remember me
