ಬೆಂಗಳೂರು:ಮಾಂಡೌಸ್​ ಚಂಡಮಾರುತ ಪರಿಣಾಮ ನಗರದಲ್ಲಿ ಶುಕ್ರವಾರ ರಾತ್ರಿಯಿಂದಲೂ ತುಂತುರು ಮಳೆ ಸುರಿಯುತ್ತಿದ್ದು, ಮೋಡ ಕವಿದ ವಾತಾವರಣವಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಥಂಡಿ ಅನುಭವವಾಗುತ್ತಿದೆ.
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮಾಂಡೌಸ್​ ಚಂಡಮಾರುತವು ಶುಕ್ರವಾರ ತಡರಾತ್ರಿ ತಮಿಳುನಾಡು ಕರಾವಳಿಗೆ ಅಪ್ಪಳಿಸಿದ್ದು, ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನ ಉತ್ತರ, ಪುದುಚೇರಿ ಹಾಗೂ ಆಂಧ್ರಪ್ರದೇಶ ಶ್ರೀಹರಿಕೋಟಾದ ತೀರ ಪ್ರದೇಶಗಳಲ್ಲಿ ಚಂಡಮಾರುತ ಹಾದು ಹೋಗಲಿದ್ದು, ಈ ವೇಳೆ ಗಂಟೆಗೆ 65ರಿಂದ 70 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಡಕದಲ್ಲೂ ಇದರ ಪರಿಣಾಮ ಬೀರಿದೆ. ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ. ಮೋಡ ಕವಿದ ವಾತಾವರಣ ಇರುವುದರಿಂದ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಸರಾಸರಿ 4ರಿಂದ 8 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ಕುಸಿತವಾಗಿದೆ.ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಚಿಕ್ಕಮಗಳೂರ, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆಯಲ್ಲಿ ನಾಳೆ-ನಾಡಿದ್ದು ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​​ ಘೋಷಿಸಿದೆ. ಸದ್ಯ ಎಲ್ಲೆಡೆ ಥಂಡಿ ವಾತಾವರಣ ಇದ್ದು, ತುಂತುರು ಮಳೆಯಾಗುತ್ತಿದೆ.
ತಮಿಳುನಾಡಿಗೆ ಅಪ್ಪಳಿಸಿದ ಮಾಂಡೌಸ್​ ಚಂಡಮಾರುತ: ರಾತ್ರಿಯಿಡೀ ಧಾರಾಕಾರ ಮಳೆ, ಭೂ ಕುಸಿತ

ಒಂದೇ ರಾತ್ರಿ 2 ಬಾರಿ ಸಂಭೋಗಿಸಲು ನಿರಾಕರಿಸಿದ ಪತ್ನಿಯನ್ನೇ ಕೊಂದು ಹೈಡ್ರಾಮ! ಈತ ಕಟ್ಟಿದ ಕಥೆ ಅಷ್ಟಿಷ್ಟಲ್ಲ

ಬ್ಯಾನ್ ಮಾಡಿದ್ದು ತಪ್ಪು, ಒಬ್ಬ ಕಲಾವಿದನ ಬದುಕು ಕಿತ್ತುಕೊಳ್ಳೋ ಹಕ್ಕು ಯಾರಿಗೂ ಇಲ್ಲ… ಅನಿರುದ್ಧ್​ ಪರ ಫಿಲ್ಮ್​ ಚೇಂಬರ್​ ಬ್ಯಾಟಿಂಗ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 2 =
Remember me
