ಮಂಡ್ಯ:ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡರಾದ ಕೆ.ಎಸ್.ಮಲ್ಲಿಕಾರ್ಜುನ್ ಹಾಗೂ ಎಂ.ಬಿ.ಬಸವರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಆದೇಶಿಸಿದ್ದಾರೆ.ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಎರಡು ವರ್ಷದಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವುದಲ್ಲದೆ, ಪಕ್ಷದ ಸೂಚನೆ ಧಿಕ್ಕರಿಸಿ ನಡೆದುಕೊಳ್ಳುವ ಮೂಲಕ ಘನತೆಗೆ ಕುಂದುಂಟು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಅವರ ಆದೇಶದ ಮೇರೆಗೆ ಆರು ವರ್ಷ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿಸಿದ್ದಾರೆ.ಜಿಲ್ಲಾಧ್ಯಕ್ಷ ಕೆ.ಜೆ.ವಿಜಯಕುಮಾರ್ ವಿರುದ್ಧ ಇತ್ತೀಚೆಗೆ ಪಕ್ಷದ ಕಚೇರಿ ಮುಂದೆ ಕೆಲ ಕಾರ್ಯಕರ್ತರೊಂದಿಗೆ ಕೆ.ಎಸ್.ಮಲ್ಲಿಕಾರ್ಜುನ್ ಮತ್ತು ಎಂ.ಬಿ.ಬಸವರಾಜು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಜಿಲ್ಲಾ ಸಮಿತಿಯಿಂದ ವರದಿ ಪಡೆದು ಶಿಸ್ತು ಕ್ರಮ ಕೈಗೊಂಡಿದ್ದಾರೆ. ಅಂತೆಯೆ ಮುಂದಿನ ದಿನಗಳಲ್ಲಿ ಪಕ್ಷ ವಿರೋಧಿಯಾಗಿ ನಡೆದುಕೊಳ್ಳದಂತೆ ಕಾರ್ಯಕರ್ತರು, ಮುಖಂಡರಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
