ಮಂಡ್ಯ:ಪ್ರತಿ ಟನ್ ಕಬ್ಬಿಗೆ 4,500 ರೂ. ಹಾಗೂ ಪ್ರತಿ ಲೀಟರ್ ಹಾಲಿಗೆ 40 ರೂ. ಘೋಷಿಸುವಂತೆ ಒತ್ತಾಯಿಸಿ ರೈತ ಸಂಘವು ಇಂದು(ಸೋಮವಾರ) ಮಂಡ್ಯ ನಗರ ಬಂದ್‌ಗೆ ಕರೆ ನೀಡಿದ್ದು, ಇದಕ್ಕೆ ಬೆಂಬಲ ಸೂಚಿಸಿ ಹಲವು ಸಂಘಟನೆಗಳು ಪಾಲ್ಗೊಂಡಿವೆ. ಮಾತ್ರವಲ್ಲದೆ ಮದ್ದೂರು ಪಟ್ಟಣ ಹಾಗೂ ಕೆ.ಎಂ.ದೊಡ್ಡಿಯಲ್ಲಿಯೂ ಬಂದ್‌ ಮಾಡಲಾಗುತ್ತಿದೆ.
ರಸ್ತೆಗಿಳಿದ ಅನ್ನದಾತರು ಮಂಡ್ಯದ ಸಂಜಯ್ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ತಡೆದು ಪ್ರತಿಭಟನೆ ಆರಂಭಿಸಿದ್ದಾರೆ. ಬಸ್ ಮುಂಭಾಗ ಮಲಗಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸುತ್ತಾ, ಬಂದ್​ಗೆ ಸಹಕರಿಸವಂತೆ ಮನವಿ ಮಾಡುತ್ತಿದ್ದಾರೆ. ಇನ್ನು ಕೆಲವೇ ಕ್ಷಣದಲ್ಲಿ ಚಡ್ಡಿ ಚಳುವಳಿ, ಬಾರುಗೋಲು ಚಳುವಳಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಲಿದ್ದಾರೆ.
ದರ ನಿಗದಿ ಸಂಬಂಧ ನ.7ರಿಂದ ಮಂಡ್ಯದಲ್ಲಿ ರೈತ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಲಾಯಿತು. ಅಂತೆಯೇ ಭಾನುವಾರ 42ನೇ ದಿನ ಪೂರೈಸಿದೆ. ಈವರೆಗೆ ಹಲವು ಸಂಘಟನೆಗಳು ಹೋರಾಟಕ್ಕೆ ಬೆಂಬಲ ಸೂಚಿಸಿದ್ದವು. ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ಸ್ಥಳಕ್ಕೆ ಭೇಟಿ ಭರವಸೆ ನೀಡಿದ್ದರು. ಆದರೆ ಇಷ್ಟು ದಿನವಾದರೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ಈ ಮೂಲಕ ಹೋರಾಟವನ್ನು ತೀವ್ರಗೊಳಿಸಲಾಗುತ್ತಿದೆ.ಬಂದ್‌ನ ಸ್ವರೂಪ: ರೈತ ಸಂಘದೊಂದಿಗೆ ಹಲವು ಸಂಘಟನೆಗಳು ಹೋರಾಟಕ್ಕಿಳಿಯಲಿವೆ. ಈ ಹಿನ್ನೆಲೆಯಲ್ಲಿ ಬಂದ್‌ ಯಶಸ್ವಿಗೊಳಿಸಲು ಹಾಗೂ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಬೈಕ್‌ ರ್ಯಾಲಿ ಬಳಿಕ ಬೆಳಗ್ಗೆ 10.30ಕ್ಕೆ ಎಲ್ಲರೂ ಒಗ್ಗೂಡಿ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮಾಡಲಿದ್ದಾರೆ.
ಮದ್ದೂರು ತಾಲೂಕು ರೈತರಿಂದ ಚಡ್ಡಿ ಮೆರವಣಿಗೆ, ಮಂಡ್ಯ ತಾಲೂಕು ರೈತ ಮಹಿಳೆಯರಿಂದ ಬಾರುಕೋಲು ಚಳವಳಿ ಆಯೋಜಿಸಲಾಗಿದೆ. ಅಂತೆಯೇ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸಾಂಕೇತಿಕವಾಗಿ ಕಬ್ಬು ಸುಡಲಾಗುತ್ತದೆ. ಬಳಿಕ ಎತ್ತಿನಗಾಡಿ ಮೆರವಣಿಗೆ ಮೂಲಕ ಸರ್ ಎಂವಿ ಪ್ರತಿಮೆವರೆಗೆ ನಡೆಯಲಿದೆ. ಮಾತ್ರವಲ್ಲದೆ ಮಧ್ಯಾಹ್ನ 1 ಗಂಟೆವರೆಗೆ ಧರಣಿ ಸ್ಥಳಕ್ಕೆ ಬಹಿರಂಗ ಸಭೆ ಹಾಗೂ ನಿರ್ಣಯಗಳ ಮಂಡನೆ ಮಾಡಲಾಗುವುದು. ಬಂದ್‌ನಲ್ಲಿ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸಮಾಲಿ ಪಾಟೀಲ್‌, ಅಧ್ಯಕ್ಷ ಬಡಗಲಪುರ ನಾಗೇಂದ್ರ, ಸುನೀತಾ ಪುಟ್ಟಣ್ಣಯ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.
ಹಳ್ಳಿಗಳಲ್ಲಿ ವ್ಯಾಪಕ ಪ್ರಚಾರ:ಮಂಡ್ಯ ನಗರ ಬಂದ್‌ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ನೇತೃತ್ವದಲ್ಲಿ ಹಳ್ಳಿಗಳಲ್ಲಿಯೂ ವ್ಯಾಪಕ ಪ್ರಚಾರ ಮಾಡಲಾಗಿದೆ. ಮಾತ್ರವಲ್ಲದೆ ಬಂದ್‌ನ ಉದ್ದೇಶ ಹಾಗೂ ದರ ನಿಗದಿಯಾದರೆ ರೈತರಿಗೆ ಆಗುವ ಅನುಕೂಲದ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಇದಕ್ಕೆ ಉತ್ತಮ ಸ್ಪಂದನೆಯೂ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಎತ್ತಿನಗಾಡಿಗಳೊಂದಿಗೆ ಭಾಗವಹಿಸುವಂತೆ ಮನವಿ ಮಾಡಿದರೂ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಂಡ್ಯ ನಗರಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಮದ್ದೂರು, ಕೆ.ಎಂ.ದೊಡ್ಡಿ ಬಂದ್:ಹೋರಾಟಕ್ಕೆ ಬೆಂಬಲ ಸೂಚಿಸಿ ಮದ್ದೂರು ಪಟ್ಟಣ ಹಾಗೂ ಕೆ.ಎಂ.ದೊಡ್ಡಿ ಬಂದ್‌ ಕರೆ ನೀಡಲಾಗಿದೆ. ಮದ್ದೂರಿನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬಂದ್ ಆಚರಿಸಲಾಗುತ್ತಿದೆ. ಇದಕ್ಕೆ ಹಲವು ಸಂಘಟನೆಗಳು ಸಾಥ್ ನೀಡಲಿವೆ. ಇನ್ನು ಕೆ.ಎಂ.ದೊಡ್ಡಿಯಲ್ಲಿಯೂ ಬಂದ್ ಅಂಗವಾಗಿ ಬೆಳಗ್ಗೆ 7 ಗಂಟೆಗೆ ಸರ್ ಎಂವಿ ಪ್ರತಿಮೆಯಿಂದ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಬಂದ್‌ ಹಿನ್ನೆಲೆಯಲ್ಲಿ ಬಂದೋಬಸ್ತ್ ಮಾಡಲಾಗಿದೆ. ಆದರೆ ಒತ್ತಾಯಪೂರ್ವಕವಾಗಿ ಅಂಗಡಿ ಬಾಗಿಲು ಮುಚ್ಚಿಸುವಂತಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗಬಾರದು. ಇನ್ನು ಸುಪ್ರೀಂ ಕೋರ್ಟ್ ನಿಯಮಗಳನ್ನು ತಪ್ಪದೇ ಪಾಲನೆ ಮಾಡಬೇಕು. ಈ ಸಂಬಂಧ ಆಯೋಜಕರಿಗೆ ನೋಟಿಸ್ ನೀಡಲಾಗಿದೆ.|ಎನ್.ಯತೀಶ್ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಮಂಡ್ಯ ನಗರ ಬಂದ್‌ಗೆ ಹಲವು ಸಂಘಟನೆಗಳ ಬೆಂಬಲ ಸೂಚಿಸಿವೆ. ಇಡೀ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಲಿದೆ. ಮಧ್ಯಾಹ್ನ 2 ಗಂಟೆವರೆಗೆ ಬಂದ್‌ ಆಚರಣೆ ಮಾಡಲಾಗುವುದು. ಇಡೀ ರೈತ ಸಮುದಾಯಕ್ಕೆ ಅನುಕೂಲವಾಗಲೆಂದು ಪ್ರತಿಭಟನೆ ಮಾಡಲಾಗುತ್ತಿದೆ. ಆದ್ದರಿಂದ ಎಲ್ಲರೂ ಸಹಕರಿಸಬೇಕು. ಬಂದ್‌ನ ನಂತರ ಎಂದಿನಂತೆ ಅನಿರ್ದಿಷ್ಟಾವಧಿ ಧರಣಿ ಮುಂದುವರಿಯಲಿದೆ.|ಎಸ್.ಸಿ.ಮಧುಚಂದನ್ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ
ಫಿಫಾ ವಿಶ್ವಕಪ್: ಸೋಲಿನ ಆಘಾತದಿಂದ ಕ್ರೀಡಾಂಗಣದಲ್ಲೇ ಕುಳಿತ ಫೈನಲ್​ ಹೀರೋ ಎಂಬೆಪ್ಪೆಗೆ ಸಮಾಧಾನ ಹೇಳಿದ ಫ್ರೆಂಚ್ ಅಧ್ಯಕ್ಷ

ಕೋವಿಡ್​ಗೆ ತಾಯಿ ಬಲಿ… ಒಂದೊತ್ತಿನ ಊಟಕ್ಕೂ ಬೀದಿಬೀದಿ ಅಲೆಯುತ್ತಿದ್ದ 10 ವರ್ಷದ ಬಾಲಕ ರಾತ್ರೋರಾತ್ರಿ ಕೋಟ್ಯಧಿಪತಿಯಾದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 17 =
Remember me
