ಮಂಡ್ಯ:ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು ಮನವಿ ಮಾಡಿದರು.ಸ್ವಚ್ಚ ಭಾರತ್ ಅಭಿಯಾನದಡಿ ನಗರಸಭೆ ವತಿಯಿಂದ ಬುಧವಾರ 26ನೇ ವಾರ್ಡಿನ ತಾವರಗೆರೆ ಚಲುವಯ್ಯ ಉದ್ಯಾನದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಕಸ ಗುಡಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಮಂಡ್ಯ ನಗರದ 35 ವಾರ್ಡ್‌ನಲ್ಲೂ ಸಹ ಸ್ವಚ್ಛ ಮಾಸಾಚರಣೆ ಹಮ್ಮಿಕೊಳ್ಳಲಾಗಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ಕಾರ್ಯಕ್ರಮ ನಡೆಯಲಿದೆ ಎಂದರು.ನಗರದ ಸ್ವಚ್ಛತೆಯ ಕೆಲಸ ನಿರ್ವಹಣೆ ಮಾಡುವಲ್ಲಿ ಪೌರ ಕಾರ್ಮಿಕರ ಪಾತ್ರ ದೊಡ್ಡದು. ಅವರ ಕೆಲಸಕ್ಕೆ ಸಾರ್ವಜನಿಕರೂ ಸಹಕಾರ ನೀಡಬೇಕು. ಕಸ ವಿಲೇವಾರಿ ಮಾಡುವಾಗ ಹಸಿ ಮತ್ತು ಒಣ ಕಸ ಬೇರ್ಪಡಿಸಿ ಕೊಡಬೇಕು. ಹಗಲಿರುಳೂ ಪೌರ ಕಾರ್ಮಿಕರು ಸ್ವಚ್ಛತಾ ಕೆಲಸ ಮಾಡುತ್ತಾರೆ ಎಂದರು.ನಗರಸಭೆ ಪೌರಾಯುಕ್ತ ಲೋಕೇಶ್ ಮಾತನಾಡಿ, ನಗರದ ಪ್ರತೀ ವಾರ್ಡ್‌ನಲ್ಲೂ ಕಸ ವಿಲೇವಾರಿ ಮಾಡಲಾಗುತ್ತಿದೆ. ಪ್ರತೀ ಹಂತದಲ್ಲೂ ಸ್ವಚ್ಛತೆ ಮಾಡುವಾಗಲೂ ನಾಗರಿಕರು ಸಹಕರಿಸಬೇಕು. ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ ನಗರಸಭೆ ಆಟೋ ಬಂದಾಗ ಕೊಟ್ಟಲ್ಲಿ ಹಸಿಕಸದಿಂದ ಗೊಬ್ಬರ ತಯಾರಿಸಲು ಸಹಕಾರಿಯಾಗುತ್ತದೆ. ಬೇರ್ಪಡಿಸಿ ಕೊಟ್ಟಾಗ ನಮಗೂ ವಿಲೇವಾರಿ ಮಾಡಲು ಅನುಕೂಲವಾಗುತ್ತದೆ ಎಂದು ಹೇಳಿದರು.ಒಂದು ವರ್ಷದಿಂದ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಷೇದಿಸಲಾಗಿತ್ತು. ಕರೊನಾ ಬಂದ ನಂತರದ ದಿನಗಳಲ್ಲಿ ಮತ್ತೆ ಪ್ಲಾಸ್ಟಿಕ್ ಬಳಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡಿದಲ್ಲಿ ಸಾರ್ವಜನಿಕರಿಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ನಗರಸಭೆ ಉಪಾಧ್ಯಕ್ಷೆ ಇಶ್ರತ್ ಫಾತೀಮಾ, ಸದಸ್ಯರಾದ ಶ್ರೀಧರ್, ಸೌಭಾಗ್ಯ, ನಗರಸಭಾ ಪರಿಸರ ಅಭಿಯಂತರೆ ಮೀನಾಕ್ಷಿ, ಆರೋಗ್ಯ ನಿರೀಕ್ಷಕ ಗೋವಿಂದರಾಜು, ಮುಖಂಡ ಎಂ.ಆರ್.ಮಂಜುನಾಥ್ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
