ಮಂಡ್ಯ:ಯಾವುದೇ ತಾಲೂಕು ಕಚೇರಿಯಲ್ಲಿ ಮತದಾರರ ಸೇರ್ಪಡೆ ಸಂಬಂಧ ತಹಸೀಲ್ದಾರ್‌ಗಳೇ ಖುದ್ದು ಪರಿಶೀಲಿಸಿ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚಿಸಿದರು.ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕರಡು ಮತದಾರರ ಪಟ್ಟಿ ಪ್ರಚಾರ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನ.18ರಂದು ಜಿಲ್ಲೆಯ ಎಲ್ಲ ಮತಗಟ್ಟೆ, ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಡಿ.17ರವರೆಗೆ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.ನ.22 ಮತ್ತು 29, ಡಿ.6 ಮತ್ತು 13ರಂದು ವಿಶೇಷ ನೋಂದಣಿ ಅಡಿ 2021 ಜ.1ಕ್ಕೆ 18 ವರ್ಷ ಪೂರ್ಣಗೊಂಡ ಯುವಕ-ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು. ಜ.7ರಂದು ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ನಿಯಾಮನುಸಾರ ಇತ್ಯರ್ಥಪಡಿಸಲಾಗುವುದು ಎಂದರು.ವಿಶೇಷ ನೋಂದಣಿಯಡಿ ನಮೂನೆ-6, ಮೃತಪಟ್ಟಿರುವ ಮತ್ತು ಸ್ಥಳಾಂತರಗೊಂಡಿರುವ ಮತದಾರರನ್ನು ನಮೂನೆ-7, ಮತದಾರರ ವಿವಿಧ ಲೋಪದೋಷಗಳನ್ನು ತಿದ್ದುಪಡಿ ಮಾಡಲು ನಮೂನೆ-8ರೊಂದಿಗೆ ಸೂಕ್ತ ದಾಖಲಾತಿಗಳನ್ನು ಪರಿಶೀಲಿಸಿ ಸಂಬಂಧ ಪಟ್ಟ ಮತಗಟ್ಟೆ ಮಟ್ಟದ ಸಲ್ಲಿಸಬೇಕು. ಮತದಾರರ ಪಟ್ಟಿಗೆ ಸೇರ್ಪಡೆಯಾಗದ 20 ವರ್ಷ ಮೇಲ್ಪಟ್ಟಂತಹ ಯುವಕ-ಯುವತಿಯರನ್ನು ನೂತವಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಸ್ವಯಂ ದೃಢೀಕರಣ ಪತ್ರವನ್ನು ನೀಡಬೇಕು ಎಂದು ಹೇಳಿದರು.ಅಪರ ಜಿಲ್ಲಾಧಿಕಾರಿ ಶೈಲಜಾ, ಉಪವಿಭಾಗಾಧಿಕಾರಿಗಳಾದ ನೇಹಾ ಜೈನ್, ಶಿವನಂದಾಮೂರ್ತಿ ಸೇರಿದಂತೆ ರಾಜಕೀಯ ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:1 × 1 =
Remember me
