ಮಂಡ್ಯ:ಎಸ್​ಇಟಿ ಶಾಲೆಯ ಶಿಕ್ಷಕಿ ದೀಪಿಕಾ(28) ಅವರನ್ನು ಕೊಲೆಗೈದು ಬೆಟ್ಟದ ತಪ್ಪಲಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಒಂದೇ ಊರಿನ ಹುಡುಗನಿಂದಲೇ ಶಿಕ್ಷಕಿ ಕೊಲೆಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:IND vs ENG: ಎರಡು ಟೆಸ್ಟ್​ ಪಂದ್ಯಗಳಿಗೆ ಆರ್‌ಸಿಬಿ ಈ ಸ್ಟಾರ್ ಆಟಗಾರ ಆಯ್ಕೆ
ಮೇಲುಕೋಟೆ ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೊಲೆ‌ಮಾಡಿ ಮಣ್ಣಿನಲ್ಲಿ ಹೂತು ಹಾಕಿದ್ದು, ಅದೇ ಗ್ರಾಮದ ಪರಿಚಿತ ಯುವಕ ನಿತೇಶ್ ಕುಮಾರ್ ಎಂದು ಅನುಮಾನ ವ್ಯಕ್ತವಾಗಿದೆ. ಆರೋಪಿಯ ಬಂಧನಕ್ಕೆ ವಿಶೇಷ ತಂಡ ರಚಿಸಿಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ತಿಳಿಸಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಎಸ್ಪಿ ಅವರು, ಜನವರಿ 20 ಶನಿವಾರ ಕಾಣೆಯಾಗಿದ್ದ ಶಿಕ್ಷಕಿ ಕೊಲೆ ಪ್ರಕರಣದಲ್ಲಿ ಮಾಣಿಕ್ಯ ಗ್ರಾಮದ ಲೋಕೇಶ್ ಅವರ ಪತ್ನಿ ದೀಪಿಕಾ ನಾಪತ್ತೆ ಕುರಿತು ಮೇಲುಕೋಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯೋಗಾನರಸಿಂಹ ಸ್ವಾಮಿ ಬೆಟ್ಟದ ಮೇಲೆ ಪ್ರವಾಸಿಗರೊಬ್ಬರು ರೀಲ್ಸ್ ಮಾಡುವಾಗ ಬೆಟ್ಟದ ಹಿಂಭಾಗ ವ್ಯಕ್ತಿಯೊಬ್ಬ ಕೊಲೆ ಮಾಡುವುದನ್ನು ಕಂಡು 13 ಸೆಕೆಂಡ್ ವಿಡಿಯೋ ಚಿತ್ರೀಕರಿಸಿ ಠಾಣೆಗೆ ಬಂದು ನೀಡಿದ್ದಾರೆ. ಇದಾದ ಬಳಿಕ ಬೆಟ್ಟದ ಹಿಂಭಾಗ ಪೊಲೀಸರು ಸುತ್ತ ಮುತ್ತ ಹುಡುಕಾಟ ಮಾಡಿದಾಗ ಸ್ಕೂಟರ್ ಸಿಕ್ಕಿತ್ತು. ನಂತರ ಹುಡುಕಾಟ ನಡೆಸಿದ್ದರೂ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ.
ಎರಡು ದಿನಗಳ ಬಳಿಕ ಆ ಸ್ಥಳದಲ್ಲಿ ದುರ್ವಾಸನೆ ಬರುತ್ತಿದ್ದ ಸ್ಥಳದಲ್ಲಿ ಗುಂಡಿ ತೆಗೆದು ನೋಡಿದಾಗ ಗೋಣಿ ಚೀಲದಲ್ಲಿ ಶವ ಪತ್ತೆಯಾಗಿದೆ. ಪೋಷಕರು ಕೂಡ ಶವ ದೀಪಿಕಾಳದ್ದೇ ಅಂತಾ ಗುರುತಿಸಿದ್ದಾರೆ. ಕೊಲೆ ಪ್ರಕರಣ ದಾಖಲಿಸಿ ಕಾಣೆಯಾದ ಹುಡುಗ ಆರೋಪಿ ನಿತೇಶ್​ ಕುಮಾರ್​ಗಾಗಿ ಹುಡುಕಾಟ ನಡೆಸಿದ್ದೇವೆ. ಎಲ್ಲಾ ಆಯಾಮಗಳಲ್ಲಿ ಈ ಪ್ರಕರಣ ತನಿಖೆ ಮಾಡುತ್ತಿದ್ದು, ಶನಿವಾರ ಪ್ರವಾಸಿಗರು ನೀಡಿದ ವಿಡಿಯೋ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದರು.
ನಿತೀಶ್ ಅಕ್ಕ ಅಕ್ಕ ಎನ್ನುತ್ತಲೇ ದೀಪಿಕಾ ಜೊತೆ ಸ್ನೇಹ ಬೆಳೆಸಿದ್ದ. ಒಂದೇ ಊರಿನವನಾದ್ದರಿಂದ ದೀಪಿಕಾ ಆತನ ಜೊತೆ ಸಲುಗೆಯಿಂದಲೇ ಮಾತನಾಡುತ್ತಿದ್ದಳು. ಈಕೆಯ ಕೊಲೆಯ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿತ್ತು. ಇದೀಗ ಸ್ವಗ್ರಾಮದ ಯುವಕನ ವಿರುದ್ಧ ಮೃತ ದೀಪಿಕಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ದೀಪಿಕಾ ನಾಪತ್ತೆಗೂ ಮುನ್ನ ನಿತೀಶ್ (22) ಎಂಬಾತ ಕೊನೆಯ ಕರೆ ಮಾಡಿದ್ದ. ದೀಪಿಕಾ ಮೃತದೇಹ ಸಿಗುತ್ತಿದ್ದಂತೆ ಯುವಕ ಗ್ರಾಮದಿಂದ ನಾಪತ್ತೆಯಾಗಿದ್ದಾನೆ.
ಲಂಗ-ದಾವಣಿಯಲ್ಲಿ ಮಿಂಚಿದ ಪೂಜಾ ಹೆಗ್ಡೆ: ವಾವ್ ಎಂದ ಅಭಿಮಾನಿಗಳು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × five =
Remember me
