ಮಂಡ್ಯ:ಗ್ರಾಮ ಪಂಚಾಯಿತಿ ಚುನಾವಣೆ ರಂಗೇರಿದ್ದು, ಹಲವೆಡೆ ಅಭ್ಯರ್ಥಿಗಳ ಅವಿರೋಧ ಆಯ್ಕೆಗೆ ಕಸರತ್ತು ನಡೆದಿದೆ. ಇಂದಿನಿಂದ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ ಆಗಿದ್ದು, ಅಭ್ಯರ್ಥಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಲೋಕಲ್ ವಾರ್​ನ ಅಬ್ಬರ ತುಸು ಜೋರಾಗಿಯೇ ಇದ್ದು, ತಹಸೀಲ್ದಾರೊಬ್ಬರು ತನ್ನ ಪತ್ನಿಯನ್ನು ಅವಿರೋಧ ಆಯ್ಕೆ ಮಾಡುವುದಕ್ಕಾಗಿ ಬರೋಬ್ಬರಿ 25 ಲಕ್ಷ ರೂಪಾಯಿ ಆಫರ್ ಕೊಟ್ಟಿದ್ದಾರೆ!
ಮಂಡ್ಯ ತಾಲೂಕಿನ ಕೆರಗೋಡು ಗ್ರಾ.ಪಂ ವ್ಯಾಪ್ತಿಯ ಪಂಚಲಿಂಗನದೊಡ್ಡಿ ಗ್ರಾಮದ ಮುಖಂಡರ ಸಮ್ಮುಖದಲ್ಲಿ 25 ಲಕ್ಷ ರೂಪಾಯಿ ನೀಡುವುದಾಗಿ ತಹಸೀಲ್ದಾರ್​ ಹೇಳಿದ್ದಾರೆ. ತನ್ನ ಪತ್ನಿಯನ್ನು ಗ್ರಾಪಂ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಿದ್ರೆ ಊರಿನ ಅಭಿವೃದ್ಧಿ, ದೇವಸ್ಥಾನ ನಿರ್ಮಾಣಕ್ಕೆ 25 ಲಕ್ಷ ರೂ. ನೀಡಲು ಒಪ್ಪಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಗ್ರಾಮಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ತಹಸೀಲ್ದಾರ್​ಗೆ ಪತ್ನಿಯನ್ನು ಚುನಾವಣೆಗೆ ನಿಲ್ಲಿಸುವ ಮನಸ್ಸಿರಲಿಲ್ಲ. ಗ್ರಾಮದ ಅಭಿವೃದ್ಧಿಗಾಗಿ ಮುಖಂಡರೆಲ್ಲ ಸೇರಿ ತಮ್ಮ ಮನೆಯವರನ್ನೇ ಚುನಾವಣೆಗೆ ನಿಲ್ಲುವಂತೆ ಮನವಿ ಮಾಡಿದ್ದೆವು. ಈ ವೇಳೆ ಗ್ರಾಮದ ಅಭಿವೃದ್ಧಿ, ದೇವಸ್ಥಾನ ನಿರ್ಮಾಣಕ್ಕೆ ಸಹಾಯ ಮಾಡುವ ಜತೆಗೆ ಒಂದೂವರೆ ಗುಂಟೆ ಜಾಗ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಊರಿಗೆ ಭೇಟಿ ನೀಡಿದ ಮಾಧ್ಯಮದವರಿಗೆ ಗ್ರಾಮಸ್ಥರು ಸ್ಪಷ್ಟಪಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ನನ್ನನ್ನು ಮಂತ್ರಿ ಮಾಡಿ, ಇಲ್ಲವೇ ವಿಷ ಕೊಡಿ… ಈ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿಎಂ

ರಕ್ತದ ಮಡುವಿನಲ್ಲಿ ಬಿದ್ದು ಅಂಗಲಾಚುತ್ತಿದ್ದ ಮಂಜನ ಪ್ರಾಣ ಜನರ ಕಣ್ಣೆದುರೇ ಹೋಯ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 19 =
Remember me
