ಮಂಡ್ಯ: ಮಂಡ್ಯದಲ್ಲಿ ಲೋಕಸಭಾ ಚುನಾವಣಾ ಪೂರ್ವದಲ್ಲೇ ಆರಂಭವಾದ ಜೆಡಿಎಸ್​ ವರ್ಸಸ್ ಸುಮಲತಾ ಫೈಟ್ ಇನ್ನೂ ಮುಂದುವರಿದಿದೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲೂ ಈಗ ರಾಜಕೀಯ ಶುರುವಾಗಿದ್ದು, ಕಾರ್ಯಕ್ರಮಗಳ ಮೇಲೂ ಪರಿಣಾಮ ಬೀರತೊಡಗಿದೆ.
ಸಂಸದೆ ಸುಮಲತಾ ಅಂಬರೀಷ್ ಅವರು ಪೂರ್ವ ನಿಗದಿತ ಕಾರ್ಯಕ್ರಮದಂತೆ ಹನಕೆರೆ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ್ದು ಇಂದು ಬಹಳ ಸುದ್ದಿಯಾಗಿದೆ. ಅಲ್ಲಿನ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು. ಗ್ರಾಮದಲ್ಲಿ ಇಂದು ಹಕ್ಕು ಪತ್ರ ವಿತರಣೆ ನಡೆಯಬೇಕಾಗಿತ್ತು. ಅದು ಮುಂದೂಡಲ್ಪಟ್ಟ ಕಾರಣ ಶಾಸಕರ ವಿರುದ್ಧ ಅಲ್ಲಿದ್ದ ಫಲಾನುಭವಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಸಂಸದರ ಬಳಿಕ ಅಹವಾಲು ತೋಡಿಕೊಂಡರು.
ಹನಕೆರೆ ಮಂಡ್ಯದ ಶಾಸಕ ಜೆಡಿಎಸ್​ ನಾಯಕ ಎಂ.ಶ್ರೀನಿವಾಸ್ ಅವರ ಹುಟ್ಟೂರು. ಅಲ್ಲಿ ಹಕ್ಕು ಪತ್ರವಿತರಣೆ ಕಾರ್ಯಕ್ರಮ ಇಂದು ನಡೆಯಬೇಕಾಗಿತ್ತು. ನಿಗದಿಯಾಗಿದ್ದ ಕಾರ್ಯಕ್ರಮವನ್ನು ಶಾಸಕ ಶ್ರೀನಿವಾಸ್ ಶಿಷ್ಟಾಚಾರ ಕಾರಣ ಇಟ್ಟು ಮುಂದೂಡುವಂತೆ ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದರು. ಇದರಂತೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮವನ್ನು ಜಿಲ್ಲಾಡಳಿತ ಮುಂದೂಡಿತ್ತು.
ಕಾರ್ಯಕ್ರಮ ಮುಂದೂಡಿದ ವಿಚಾರವಾಗಿ ಸಂಸದೆ ಸುಮಲತಾ ಅವರು ಅಧಿಕಾರಿಗಳ ಬಳಿ ವಿಚಾರಿಸಿದ್ದಲ್ಲದೆ, ತಹಸೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಇಒ ಅವರನ್ನು ತರಾಟೆಗೆ ತೆಗೆದುಕೊಂಡರು. ಫಲಾನುಭವಿಗಳಿಗೆ ಸಾಂತ್ವನ ಹೇಳಿ ಅಲ್ಲಿಂದ ತೆರಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 6 =
Remember me
