ಮಂಡ್ಯ:ತಲೆ ಮೇಲೆ ಕಲ್ಲು ಹಾಕಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಕ್ಕರೆನಾಡಿನ ಜನತೆಯನ್ನು ಬೆಚ್ಚಿಬೀಳಿಸಿದೆ.
ಗಣೇಶ, ಪ್ರಕಾಶ ಮತ್ತು ಆನಂದ ಕೊಲೆಯಾದವರು. ಗುರುವಾರ ರಾತ್ರಿ ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಮೂವರು ಅರ್ಚಕರಾಗಿ ಹಾಗೂ ಸೆಕ್ಯುರಿಟಿ ಆಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಮಲಗಿರುವುವಾಗ ತಲೆ ಮೇಲೆ ಕಲ್ಲು ಎತ್ತಿಹಾಕಿ ದೇವಾಲಯದ ಆವರಣದಲ್ಲೇ ಕೊಲೆ ಮಾಡಿದ್ದಾರೆ.
ಇದನ್ನೂ ಓದಿ:ಸ್ಯಾಂಡಲ್​ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ: ಪೆಡ್ಲರ್​ಗಳನ್ನು ಸಿಲುಕಿಸಲು ಡಿಜಿಟಲ್ ಸಾಕ್ಷ್ಯ
ದುಷ್ಕರ್ಮಿಗಳು ದೇವಸ್ಥಾನದ ಹುಂಡಿ ಹೊತ್ತೊಯ್ದು ಹೊರಗೆ ಬಿಸಾಡಿದ್ದು, ಹುಂಡಿ ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಪೂರ್ವ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಪತಿ ಅಂಗಡಿಯಲ್ಲಿ, ಅತ್ತೆ-ಮಾವ ದೇವಸ್ಥಾನದಲ್ಲಿ, ಇತ್ತ ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಗೆ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
