ಮಂಡ್ಯ:ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆಯಾಗಿದ್ದು, ಜನರ ಬದುಕು ಮೂರಾಬಟ್ಟೆಯಾಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಲ್ಲಲ್ಲಿ ಕಿಲೋ ಮೀಟರ್​ ದೂರದವರೆಗೂ ನೀರು ನಿಂತಿದ್ದು, ಕೆರೆಯಂತಾಗಿದೆ. ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಕೆರೆ-ಕಟ್ಟೆಗಳು ತುಂಬಿ ಜಮೀನುಗಳಿಗೆ ನೀರು ನುಗ್ಗಿದೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಐತಿಹಾಸಿಕ ತೊಣ್ಣೂರು ಕೆರೆ ಕೋಡಿ ಬಿದಿದ್ದು, ಅಪಾರ ಪ್ರಮಾಣದ ನೀರು ಹೊರ ಬಂದು ಗ್ರಾಮಕ್ಕೆ ನುಗ್ಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪೂರ್ಣ ಜಲಾವೃತಗೊಂಡಿದೆ. ನೀರಿನ ರಭಸಕ್ಕೆ ರಸ್ತೆ ಕೊಚ್ಚಿಹೋಗಿದ್ದು, ಗ್ರಾಮದ ಸಂಪರ್ಕ ಕಡಿತಗೊಂಡಿದೆ.

ಮಂಡ್ಯ ಗ್ರಾಮಾಂತರ ಹಳೆ ಬೂದನೂರು ಬಳಿ ಕೆರೆ ಒಡೆದು ಬೆಂಗಳೂರು-ಮೈಸೂರು ಮುಖ್ಯರಸ್ತೆಗೆ ನೀರು ನುಗ್ಗಿದೆ. ರಸ್ತೆ ಜಲಾವೃತಗೊಂಡ ಹಿನ್ನೆಲೆ ವಾಹನಗಳಿಗೆ ಶ್ರೀರಂಗಪಟ್ಟಣ – ಪಾಂಡವಪುರ ಮಾರ್ಗವಾಗಿ ಬೆಂಗಳೂರಿಗೆ ತೆರಳಲು ಬದಲಿ ವ್ಯವಸ್ಥೆ ಮಾಡಲಾಗಿದೆ.

ಮಂಡ್ಯದ ಕಾರಸವಾಡಿ ಕೆರೆ ಭರ್ತಿಯಾಗಿ ಕೋಡಿ ಒಡೆದಿದ್ದು, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಹನಿಯಂಬಾಡಿ, ಹೆಬ್ಬಾಳ ಮಾರ್ಗದ ತೊರೆಗಳು ಭೋರ್ಗರೆದು ಹರಿಯುತ್ತಿವೆ. ತೊರೆ ಪಕ್ಕದ ಜಮೀನುಗಳು ಜಲಾವೃತಗೊಂಡಿವೆ. ಕಬ್ಬು, ಭತ್ತ ಸೇರಿದಂತೆ ವಿವಿಧ ಬೆಳೆ ನಾಶವಾಗಿದೆ. ವಿದ್ಯುತ್ ಕಂಬಗಳು ಬಿದ್ದಿವೆ.
ಧಾರಾಕಾರ ಮಳೆಯಿಂದಾಗಿ ಪಾಂಡವಪುರ ತಾಲೂಕಿನ ಲಿಂಗಾಪುರ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ರಾತ್ರಿಯಿಡೀ ಜನರು ಆತಂಕದಲ್ಲೇ ಕಾಲ ಕಳೆದಿದ್ದಾರೆ. ಮನೆಯಲ್ಲಿದ್ದ ದಿನೋಪಯೋಗಿ ವಸ್ತು, ದಿನಸಿ, ಮಕ್ಕಳ ಪಠ್ಯ ಪುಸ್ತಕ, ದಾಖಲೆ ಪತ್ರ ಸೇರಿದಂತೆ ಎಲ್ಲ ವಸ್ತುಗಳೂ ಹಾನಿಯಾಗಿವೆ.

ಮಳವಳ್ಳಿ-ಮೈಸೂರು ರಸ್ತೆಯೂ ಜಲಾವೃತಗೊಂಡಿದೆ. ಪಕ್ಕದ ಕೆರೆಯ ಕೋಡಿ ಒಡೆದ ಕಾರಣ ರಸ್ತೆಗೆ ನೀರು ನುಗ್ಗಿದೆ. ಮಳವಳ್ಳಿ ತಾಲೂಕಿನ ಆಲದಹಳ್ಳಿಯಲ್ಲಿ ಕೆರೆ ಏರಿ ಒಡೆದಿದ್ದು, ಗದ್ದೆಗಳಿಗೆ ನೀರು ನುಗ್ಗಿ ರೈತರಿಗೆ ಅಪಾರ ಪ್ರಮಾಣ ಹಾನಿ ಸಂಭವಿಸಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜಗತ್ತಿನ ಅತಿ ದೊಡ್ಡ ನಾಗರಿಕ ವಿಮಾನ!

ರಾಜ್ಯದಲ್ಲಿ ಬೆರಕೆ ಸರ್ಕಾರ ಬರೋದು ಗ್ಯಾರಂಟಿ.. ದೇಶಕ್ಕೆ ಕೇಡು ಖಚಿತ… ಹಾಸನಾಂಬೆ ಸನ್ನಿಧಿಯಲ್ಲಿ ಬ್ರಹ್ಮಾಂಡ ಗುರೂಜಿ ಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
