ಮಂಡ್ಯ:ಜನವರಿ 20 ಕಾಣೆಯಾಗಿದ್ದ ಶಿಕ್ಷಕಿಯೊಬ್ಬರು ಶವವಾಗಿ ನಿನ್ನೆ ಪತ್ತೆಯಾಗಿದ್ದಾರೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಈ ಕುರಿತಾಗಿ ಪೊಲೀಸರು ತನಿಖೆ ಕೈಗೊಂಡಿದ್ದು, ಹತ್ಯೆಯಾದ 30 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಜಿಲ್ಲೆಯ ಮೇಲುಕೋಟೆಯಲ್ಲಿ ನಡೆದ ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ ಸಂಬಂಧ ಹತ್ಯೆಯಾದ 30 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಿತೀಶ್ ​​(21) ಬಂಧಿತ ಆರೋಪಿಯಾಗಿದ್ದಾನೆ. ಡಿವೈಎಸ್​​ಪಿ ಮುರಳಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ನಿವಾಸಿಯಾಗಿದ್ದ ದೀಪಿಕಾ ಅವರು ಜನವರಿ 20 ರಂದು ಎಂದಿನಂತೆ ಶಾಲೆಗೆ ಹೋಗಿದ್ದರು. ಆದರೆ, ಮನೆಗೆ ವಾಪಸ್ ಆಗಿರಲಿಲ್ಲ. ಹೀಗಾಗಿ ತನ್ನ ಪತ್ನಿ ನಾಪತ್ತೆಯಾಗಿರುವುದಾಗಿ ಪತಿ ಲೋಕೇಶ್​​​ ದೂರು ನೀಡಿದ್ದರು. ಸುತ್ತಮುತ್ತ ತೀವ್ರ ಹುಡುಕಾಟ ನಡೆಸಿದಾಗ ಹೂತಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ದೀಪಿಕಾಳ ಪತಿ ಲೋಕೇಶ್, ನಿತೀಶ್ ಮೇಲೆ ಶಂಕೆ ವ್ಯಕ್ತಪಸಿಡಿದ್ದರು. ಅಲ್ಲದೆ ದೀಪಿಕಾಳನ್ನ ಯುವಕನೊಬ್ಬ ಎಳೆದಾಡುತ್ತಿದ್ದ ದೃಶ್ಯವನ್ನ ಬೆಟ್ಟದ ಮೇಲಿಂದ ಪ್ರವಾಸಿಗೊಬ್ಬರು ವಿಡಿಯೋ ಮಾಡಿದ್ದರು. ಇದನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.
ದೀಪಿಕಾರನ್ನು ಕೊಲೆಗೈದ ನಂತರ ಎರಡು ದಿನಗಳ ನಿತೇಶ್ ಗ್ರಾಮದಲ್ಲೇ ಇದ್ದನು. ಯಾವಾಗ ದೀಪಿಕಾಳ ಶವ ಪತ್ತೆಯಾಯ್ತೋ ಅಂದಿನಿಂದ ನಾಪತ್ತೆಯಾಗಿದ್ದನು. ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ನಿತೇಶ್​ನನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಂಧಿಸಿದ್ದಾರೆ. ಸದ್ಯ, ಆರೋಪಿಯನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆ ಮಾಡಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ತನಿಖೆ ವಿಚಾರಣೆ ವೇಳೆ ದೀಪಿಕಾರನ್ನು ಪ್ಲ್ಯಾನ್​ ಮಾಡಿಯೇ ಕೊಲೆ ಮಾಡಿರುವುದು ತಿಳಿದುಬಂದಿದೆ. ಕೊಲೆಗೂ ಮುನ್ನ ನಿತೀಶ್ ಗುಂಡಿ ತೆಗೆದಿದ್ದನು. ನಂತರ ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದನು ಎಂದು ತಿಳಿದುಬಂದಿದೆ. ತನ್ನ ಮೇಲೆ ಅನುಮಾನ ಬಾರದಂತೆ ನಿತೇಶ್ ನಾಟಕವಾಡಿದ್ದನು. ಮೃತ ದೀಪಿಕಾಳನ್ನ ಅಕ್ಕ ಅಂತ ಕರೆದರೆ, ಆಕೆಯ ತಂದೆಯನ್ನ ಅಪ್ಪಾಜಿ ಎಂದು ನಿತೇಶ್ ಕರೆಯುತ್ತಿದ್ದ ಎನ್ನಲಾಗಿದೆ.
ನಿಮಗೊಂದು ಸವಾಲು..ಈ ಫೋಟೋದಲ್ಲಿ ಅಡಗಿರುವ ಬೆಕ್ಕನ್ನು ಪತ್ತೆ ಮಾಡಿ…


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 6 =
Remember me
