ಹಾವೇರಿ:ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ್ದ ಶಿಕ್ಷಕರೊಬ್ಬರು ಉಸಿರಾಟ ಸಮಸ್ಯೆ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮತ್ತಿಕೇರಿ ಗ್ರಾಮದ ಶಿಕ್ಷಕ ಸಂಗನಗೌಡರ (56) ಮೃತರು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಮಂಡ್ಯದಿಂದ ಹಾವೇರಿಗೆ ಆಗಮಿಸಿದ್ದರು. ಹಾವೇರಿ ನಗರದ ಗೆಳೆಯರ ಬಳಗದ ಶಾಲೆಯಲ್ಲಿ ಶುಕ್ರವಾರ ರಾತ್ರಿ ಸಂಗನಗೌಡರು ವಾಸ್ತವ್ಯ ಮಾಡಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಏಕಾಏಕಿ ಉಸಿರಾಟದ ಸಮಸ್ಯೆ ಉಂಟಾಗಿದೆ.
ತಕ್ಷಣ ಹಾವೇರಿ ಜಿಲ್ಲಾಸ್ಪತ್ರೆಗೆ ಸಂಗನಗೌಡರನ್ನು ಕರೆದೊಯ್ಯಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಮೃತದೇಹವನ್ನು ಸ್ವಗ್ರಾಮಕ್ಕೆ ರವಾನಿಸಲಾಯಿತು. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಣಿಗಲ್​ ಸ್ಟಡ್​ ಫಾರಂನಲ್ಲಿ ದುರಂತ: ಹೆಜ್ಜೇನು ದಾಳಿಗೆ ಕೋಟ್ಯಂತರ ಬೆಲೆಬಾಳುವ ವಿದೇಶಿ ತಳಿಯ 2 ಕುದುರೆಗಳ ಸಾವು

ಮಂಗಳಮುಖಿಯಾಗಿ ಲಿಂಗಪರಿವರ್ತನೆ ಮಾಡಿಸಿಕೊಂಡ ಬಂಟ್ವಾಳ ಮೂಲದ ಮುಸ್ಲಿಂ ಯುವಕ! ಆಡಿಯೋ ವೈರಲ್​ ಬೆನ್ನಲ್ಲೇ ಆಘಾತಕಾರಿ ವಿಷಯ ಚರ್ಚೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 13 =
Remember me
