ಮಂಡ್ಯ:ಮಂಡ್ಯ ವಿಶ್ವವಿದ್ಯಾಲಯದ ನೂತನ ಕುಲಪತಿ ಡಾ.ಪುಟ್ಟರಾಜು ಅವರನ್ನು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಶುಕ್ರವಾರ ಭೇಟಿ ಮಾಡಿ ಅಭಿನಂದಿಸಿದರು.ಬಳಿಕ ಮಾತನಾಡಿದ ಕೆ.ಟಿ.ಶ್ರೀಕಂಠೇಗೌಡ, ಡಾ.ಪುಟ್ಟರಾಜು ಅವರು ಮೂಲತಃ ತಾಂತ್ರಿಕ ಕ್ಷೇತ್ರದಿಂದ ಬಂದವರಾಗಿದ್ದಾರೆ. ಹೊಸ ಕನಸನ್ನು ಇಟ್ಟುಕೊಂಡ ಈ ಭಾಗದ ಜನರಿಗೆ ಅದರಲ್ಲೂ ವಿಶೇಷವಾಗಿ ಯುವಕರಿಗೆ ಉದ್ಯೋಗಾಧಾರಿತ ವಿಶೇಷ ಕೌಶಲ ಶಿಕ್ಷಣ ಕೊಡುವ ಉದ್ದೇಶ ಇಟ್ಟುಕೊಂಡು ಬಂದಿದ್ದಾರೆ. ಅವರ ಕನಸು ಸಾಕಾರಗೊಳ್ಳಲಿ. ಈ ಮೂಲಕ ವಿಶ್ವವಿದ್ಯಾಲಯ ಎತ್ತರಕ್ಕೆ ಬೆಳೆಯಲಿ. ಜಿಲ್ಲೆಯ ಯುವಕರಿಗೆ ಉದ್ಯೋಗ ಸಿಗುವ ಅವಕಾಶ ಆಗಲಿ ಎಂದು ಹಾರೈಸಿದರು.ಕರ್ನಾಟಕ ಸಂಘದ ಕಾರ್ಯದರ್ಶಿ ಲೋಕೇಶ್, ವಕೀಲ ಕುಮಾರ್, ಬಿಳೀಗೌಡ, ಪಟೇಲ, ವಿಶ್ವ, ಶಂಭುಲಿಂಗೇಗೌಡ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 11 =
Remember me
