ಮಂಡ್ಯ:ಚಿಕ್ಕ ವಯಸ್ಸಿಗೆ ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಮಾನಿಯ ಆತ್ಮಹತ್ಯೆ ಕುರಿತು ವಿಷಾದ ವ್ಯಕ್ತಪಡಿಸಿದರು.
ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಅಭಿಮಾನಿಯ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನಾನು ಸಿದ್ದರಾಮಯ್ಯ ಅಭಿಮಾನಿ ಮತ್ತು ನನ್ನ ಅಂತ್ಯಕ್ರಿಯೆಗೆ ಅವರು ಬರಬೇಕೆಂದು ಡೆತ್‌ನೋಟ್‌ನಲ್ಲಿ ಬರೆದಿದ್ದರಂತೆ.
ನನಗೆ ಈ ವಿಷಯ ತಿಳಿದ ಮೇಲೆ ಅಂತಿಮ ದರ್ಶನ ಪಡೆಯಲು ಬಂದಿದ್ದೇನೆ. ನನಗೆ ಆತ ಅಷ್ಟೇನು ಪರಿಚಯ ಇರಲಿಲ್ಲ. ಪಾಪ ಆತ ನನಗೆ ಗೊತ್ತಿಲ್ಲದೇ ದೊಡ್ಡ ಅಭಿಮಾನಿಯಾಗಿದ್ದ. ಅಭಿಮಾನಿಯಾಗಲಿ ಆಗದೇ ಇರಲಿ, ಅಂತ್ಯಕ್ರಿಯೆಗೆ ಬರಬೇಕು ಎಂದು ಬರೆದುಕೊಂಡಿದ್ದರಿಂದ ನಾನು ಬಂದೆ.
ಇದನ್ನೂ ಓದಿರಿ:ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್​ನಲ್ಲಿ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ!
ಪಾಪ ಸಾಮಾನ್ಯ ಕುಟುಂಬದಿಂದ ಬಂದಿದ್ದ ವ್ಯಕ್ತಿ ಆತ. ಮನೆಯ ಜವಾಬ್ದಾರಿ ಹೊತ್ತುಕೊಂಡಿದ್ದ ವ್ಯಕ್ತಿ. ಈತನ ಸಾವಿನಿಂದ ಮನೆಯವರಿಗೆ ನಷ್ಟ ಆಗಿದೆ. ಆತನ ತಾಯಿ ಅಣ್ಣನನ್ನು ನಾನು ಮಾತನಾಡಿಸಿದೆ. ಇನ್ನೂ ಚಿಕ್ಕ ವಯಸ್ಸು ಮದುವೆಯಾಗಿಲ್ಲ. ಚಿಕ್ಕ ವಯಸ್ಸಿಗೆ ಪ್ರಾಣ ಕಳೆದುಕೊಂಡಿರುವುದು ನೋವಿನ ಸಂಗತಿ. ಪ್ರಾಣ ಕಳೆದುಕೊಂಡಿರುವುದು ಕುಟುಂಬಕ್ಕೆ ಮಾತ್ರ ಅಲ್ಲ ಸಮಾಜಕ್ಕೂ ನಷ್ಟ. ಆತನ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.
ಆತ್ಮಹತ್ಯೆ ಯಾವುದೇ ಸಮಸ್ಯೆಗೂ ಪರಿಹಾರ ಅಲ್ಲ. ಆತ್ಮಹತ್ಯೆ ಮನಸ್ಸು ಮಾಡೋದು ಸರಿಯಾದ ನಿರ್ಧಾರ ಅಲ್ಲ. ಎಷ್ಟೇ ತೊಂದರೆ ಇರಲಿ ಸಮಸ್ಯೆ ಇರಲಿ. ಮನೆಯವರು ಹಾಗೂ ಸ್ನೇಹಿತರ ಜತೆ ಕುಳಿತು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.
ಘಟನೆ ಹಿನ್ನೆಲೆಮಾನಸಿಕವಾಗಿ ನೊಂದು ಹೋಗಿದ್ದ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ 25 ವರ್ಷದ ಕೃಷ್ಣ, ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಅಂತ್ಯಕ್ರಿಯೆಗೆ ಬರಬೇಕೆಂದು ನಟ ಯಶ್ ಮತ್ತು ಸಿದ್ದರಾಮಯ್ಯ ಹೆಸರನ್ನು ಡೆತ್​ನೋಟ್​ನಲ್ಲಿ ಬರೆದು ಕೃಷ್ಣ ಕೊನೆಯುಸಿರೆಳೆದಿದ್ದಾರೆ.(ದಿಗ್ವಿಜಯ ನ್ಯೂಸ್​)
‘ನಾನು ಸಾಯುತ್ತಿದ್ದೇನೆ, ಕ್ಷಮಿಸಿ… ಸಿದ್ದರಾಮಯ್ಯ ಸರ್‌, ಯಶ್‌ ಅಣ್ಣ ಪ್ಲೀಸ್‌ ನನ್ನ ಈ ಅಂತಿಮ ಇಚ್ಛೆ ಈಡೇರಿಸಿ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 6 =
Remember me
