ಮಂಡ್ಯ:ಗ್ರಾಮದ ಮಧ್ಯೆದಲ್ಲಿಯೇ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಹೊಡಾಘಟ್ಟ ಗ್ರಾಮದಲ್ಲಿ ನಡೆದಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ಮನೆ ಮಾಡಿದೆ.
ಗ್ರಾಮದ ಮಂಜಣ್ಣ ಎಂಬುವರ ಮಗ ಅಭಿಷೇಕ್(25) ಕೊಲೆಯಾದವ. ಶನಿವಾರ ರಾತ್ರಿ ಗ್ರಾಮದ ಮಧ್ಯದಲ್ಲಿಯೇ ಕೊಲೆ ನಡೆದಿದೆ. ಮಾರಾಕಾಸ್ತ್ರಗಳಿಂದ ಅಭಿಷೇಕ್​ ಮೇಲೆ ಹಲ್ಲೆ ಮಾಡಲಾಗಿದ್ದು, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಗುಣಮುಖರ ಪಟ್ಟಿಯಲ್ಲಿ ಭಾರತವೇ ಮೊದಲು
ಭಾನುವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಕರೆಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆಗೆ ಕಾರಣ ಏನೆಂಬುದು ತಿಳಿದಿಲ್ಲ. ಹಳೇ ವೈಷಮ್ಯ ಏನಾದರೂ ಇರಬಹುದಾ ಎಂದು ಶಂಕಿಸಲಾಗಿದೆ. ಆದರೆ, ಕೊಲೆಯಿಂದಾಗಿ ಗ್ರಾಮದಲ್ಲಿ ಆತಂಕ ಹೆಚ್ಚಿದೆ.(ದಿಗ್ವಿಜಯ ನ್ಯೂಸ್​)
https://www.vijayavani.net/sanjana-converts-in-love-jihad-trap/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
