ಮಂಗಳೂರು:12 ವರ್ಷದ ಬಾಲಕನೊಬ್ಬ 15 ದಿನಗಳಿಂದ ಕೆಮ್ಮು, ಜ್ವರದಿಂದ ಬಳಲುತ್ತಿದ್ದ. ಪಾಲಕರು ಕ್ಲಿನಿಕ್​ನಲ್ಲಿ ಚಿಕಿತ್ಸೆ ಕೊಡಿಸಿದರೂ ಕೆಮ್ಮು-ಜ್ವರ ಕಡಿಮೆ ಆಗಲಿಲ್ಲ. ಏನಾಗಿದೆಯೆಂದು ಅರಿಯದ ಪಾಲಕರು ಮಗನನ್ನು ಕರೆದುಕೊಂಡು ಆಸ್ಪತ್ರೆಗೆ ಹೋದರು. ಆಗ ಗೊತ್ತಾಯ್ತು ಮಗನ ಶ್ವಾಸಕೋಶದಲ್ಲಿ ಗುಂಡು ಸೂಜಿ ಇರೋದು!
ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಪುತ್ರ ಮುಬಶ್ಶೀರ್ (12)ಗೆ ಕೆಮ್ಮ-ಜ್ವರ ಬಾಧಿಸುತ್ತಲೇ ಇತ್ತು. ಮಗನ ಆರೋಗ್ಯ ಕೆಟ್ಟಿದೆ, ಸರಿ ಮಾಡಿ ಡಾಕ್ಟ್ರೇ ಎಂದು ಬಾಲಕನ ಪಾಲಕರು ಕಂಕನಾಡಿಯ ಮಕ್ಕಳ ತಜ್ಞ ಡಾ.ರಾಮ್ ಗೋಪಾಲ್ ಶಾಸ್ತ್ರಿ ಬಳಿ ಹೋದರು. ಆಗ ವೈದ್ಯರು ಬಾಲಕನ ಎಕ್ಸ್‌ರೇ ತೆಗೆಸಿದಾಗ ಬಾಲಕನ ಬಲಬದಿಯ ಶ್ವಾಸಕೋಶದಲ್ಲಿ ನೋಟಿಸ್​ ಬೋರ್ಡಿಗೆ ಅಂಟಿಸುವ ಗುಂಡುಸೂಜಿ ಪತ್ತೆಯಾಗಿದೆ.ಇದನ್ನೂ ಓದಿರಿಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್​!
ಬಾಲಕನಿಗೆ ಶಸ್ತ್ರಚಿಕಿತ್ಸೆ ನೀಡಲೆಂದು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡದೆ ಪೈಪ್ ಮಾದರಿಯ ವಸ್ತುವೊಂದರ ಸಹಾಯದಿಂದ ಗುಂಡುಸೂಜಿಯನ್ನು ಯಶಸ್ವಿಯಾಗಿ ಹೊರತೆಗೆದು ಬಾಲಕನ ಜೀವ ಉಳಿಸಿದ್ದಾರೆ. ಹೊರತೆಗೆದಿದ್ದಾರೆ. ಬುಧವಾರ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದ ಬಾಲಕ ಗುರುವಾರ ಮನೆಗೆ ತೆರಳಿದ್ದಾನೆ.
ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಸಿಡಿ ಕೇಸ್​: ಹೆಗಲು ಮುಟ್ಟಿ ನೋಡಿಕೊಂಡದ್ದಕ್ಕೂ ಈ ಫೋಟೋಗೂ ಸಂಬಂಧವಿದೆಯಾ?

ಪತಿಯನ್ನ ಕೊಂದು ಹೋಮಕುಂಡದಲ್ಲಿ ಸುಟ್ಟಿದ್ದ ಪತ್ನಿ! ಬೇಲ್​ ಮೇಲೆ ಹೊರ ಬಂದವಳಿಂದ ಮತ್ತೊಂದು ನೀಚ ಕೃತ್ಯ

ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ! ಪ್ರಿಯಕರನೊಟ್ಟಿಗೆ ಆ ರಾತ್ರಿ ನಡೆಯಿತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − fifteen =
Remember me
