ಮಂಗಳೂರು:ಚೈಲ್ಡ್​ ಕೇರ್​ ಸೆಂಟರ್​ ಒಂದರಲ್ಲೇ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಮೀಷನರ್​ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದೆ.
ಮಂಗಳೂರಿನ ಉಳ್ಳಾಲದ ನೂರಾನಿ ಯತೀಂಖಾನ & ದಾರುಲ್ ಮಸಾಕಿನ್ ಸೆಂಟರ್​ನಲ್ಲಿ ಇಂತಹ ಕೃತ್ಯ ನಡೆದಿದೆ. ಆಯೂಬ್ (52) ವರ್ಷದ ವ್ಯಕ್ತಿಯಿಂದ ಲೈಂಗಿಕ ಕಿರುಕುಳವಾಗಿರುವುದಾಗಿ ವರದಿಯಾಗಿದೆ. ಸೆಂಟರ್​ನ ಉಸ್ತಾದ್​ (ಮುಖ್ಯಸ್ಥ) ಆಗಿರುವ ಈತ 14 ವರ್ಷದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ಕಿರುಕುಳ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಸುಮಾರು ಎರಡು ತಿಂಗಳಿನಿಂದ ಕನಿಷ್ಠ ಐದು ಮಕ್ಕಳಿಗೆ ಈ ರೀತಿ ಕಿರುಕುಳ ನೀಡಿದ್ದಾಗಿ ಹೇಳಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಅದರಲ್ಲಿ ಆಯೂಬ್​ನ ನಿಜ ಬಣ್ಣ ಬಯಲಾಗಿದೆ. ಈ ಸಂಬಂಧ ಪೋಕ್ಸೋ ಕಾಯಿದೆಯಡಿ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುವುದಾಗಿ ತಿಳಿಸಲಾಗಿದೆ.
ರಂಗೇರಿದೆ ಪಶ್ಚಿಮ ಬಂಗಾಳ ಚುನಾವಣೆ: ಟಿಎಂಸಿ ಕಾರ್ಯಕರ್ತನ ಮನೆಗೆ ಇವಿಎಂ, ವಿವಿಪ್ಯಾಟ್‌!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × two =
Remember me
