ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ದ್ವಿಚಕ್ರ ವಾಹನಗಳಲ್ಲಿ ಡಬಲ್ ರೈಡ್​ಗೆ ನಿಷೇಧ ಹೇರಿ ಹೊರಡಿಸಿದ್ದ ಆದೇಶವನ್ನು ನಗರ ಪೊಲೀಸ್ ಕಮೀಷನರ್ ಹಿಂಪಡೆದಿದ್ದಾರೆ.
ಕೋಮು ದಳ್ಳುರಿಯಿಂದ ಬೇಯುತ್ತಿದ್ದ ದ.ಕ‌ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದ್ವಿಚಕ್ರ ವಾಹನದಲ್ಲಿ ಡಬಲ್ ರೈಡ್​ಗೆ ನಿಷೇಧ ಹೇರಲಾಗಿತ್ತು. ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರಿಕರನ್ನು ಹೊರತುಪಡಿಸಿ ಇತರರ ಡಬಲ್ ರೈಡ್​ಗೆ ಅವಕಾಶ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದರು. ಆದರೆ ಈ ಹೊಸ ನಿಯಮಕ್ಕೆ ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಆದೆಶವನ್ನು ಹಿಂಪಡೆಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಡಬಲ್ ರೈಡ್ ನಿಷೇಧ ಆದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಜನರಿಂದ ಮಾತ್ರವಲ್ಲದೆ, ರಾಜ್ಯಾದ್ಯಂತ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ರೋಲ್ ಸಹ ಮಾಡಲಾಗಿತ್ತು.
ಸಂಚಾರ ನಿರ್ಬಂಧ:
ಆದರೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆ ತನಕ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಈ ಹಿಂದೆ ಹೊರಡಿಸಿದ್ದ ನಿಯಮವನ್ನು ಸಡಿಲಿಕೆ ಮಾಡಿದ್ದು, ಸಂಜೆ 6ರ ಬದಲು ರಾತ್ರಿ 9ರ ವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.
ಅಂಗಡಿ, ವ್ಯಾಪಾರ, ಜನರ ಸಂಚಾರಕ್ಕೂ ಜಿಲ್ಲಾಡಳಿತ ಅವಕಾಶ ನೀಡಿದೆ. ಬಾರ್, ವೈನ್ ಶಾಪ್ ತೆರೆಯುವುದಕ್ಕೆ ಸಂಜೆ ಆರು ಗಂಟೆ ವರೆಗೆ ಅವಕಾಶ ನೀಡಲಾಗಿದ್ದು, ಉಳಿದಂತೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಮುಂದುವರಿಕೆ ಆಗಲಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ರೂಲ್ಸ್​: ದ್ವಿಚಕ್ರ ವಾಹನದಲ್ಲಿ ಡಬಲ್ ರೈಡ್​ಗೆ ಬ್ರೇಕ್​..!

ರಾಜ್ಯದಲ್ಲಿ ಮುಂದುವರಿದ ವರುಣಾರ್ಭಟ: ನಾಳೆಯೂ ಕರಾವಳಿ, ಮಲೆನಾಡಲ್ಲಿ ರೆಡ್ ಅಲರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + eight =
Remember me
