ಮಂಗಳೂರು:ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರಿನಲ್ಲಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಪ್ರವೀಣ್ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಸಾವನ್ನಪ್ಪಿದ್ದಾರೆ‌.
ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಚಿಕನ್ ಅಂಗಡಿಯ ಮಾಲೀಕರಾಗಿದ್ದು, ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಪರಿಣಾಮ, ಗಂಭೀರ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕೇರಳ ನೋಂದಣಿ ಬೈಕ್?:ಕೇರಳ ನೋಂದಣಿ ಬೈಕ್​​​ನಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ. ಮುನ್ನಚ್ಚೆರಿಕೆಯಾಗಿ ಪುತ್ತೂರು ನಗರ ಮತ್ತು ಬೆಳ್ಳಾರೆಯ ಎಲ್ಲಾ ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದ್ದಾರೆ.
ವಾರದ ಹಿಂದೆ ನಡೆದ ಕೊಲೆ ರಿವೇಂಜ್?:ಬೆಳ್ಳಾರೆಯಲ್ಲಿ ವಾರದ ಹಿಂದೆ ನಡೆದ ಕೊಲೆಗೆ ರಿವೇಂಜ್ ಸಾಧ್ಯತೆ ಎನ್ನಲಾಗಿದೆ. ಮಸೂದ್ ಎನ್ನುವ ಯುವಕನನ್ನು ಯುವಕರ ತಂಡ ಹೊಡೆದು ಕೊಂದು ಹಾಕಿತ್ತು. ಈ ಕೊಲೆಗೂ ಇಂದು ನಡೆದ ಕೊಲೆಗೂ ಸಂಬಂಧ ಇದೆ ಎನ್ನಲಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದನೇ ತರಗತಿ ಪ್ರವೇಶಕ್ಕೆ ವಯೋಮಿತಿ ಏರಿಕೆ; ಸರ್ಕಾರದಿಂದ ಮಹತ್ವದ ಆದೇಶ

ಮೂರನೇ ಸುತ್ತಿನ ವಿಚಾರಣೆ; ನಾಳೆ ಮತ್ತೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eleven =
Remember me
