ಮಂಗಳೂರು:ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ರಾಷ್ಟ್ರವ್ಯಾಪಿ ವಿವಿಧ ಕಾರ್ಮಿಕ ಸಂಘಟನೆಗಳು ಬೀದಿಗಿಳಿದಿದ್ದು, ನೆರೆ ರಾಜ್ಯ ಕೇರಳದಲ್ಲಿ ಸಂಪೂರ್ಣ ಬಂದ್​ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಕೇರಳಕ್ಕೆ ಹೋಗುವ ಬಸ್​ಗಳನ್ನು ಬಂದ್​ ಮಾಡಲಾಗಿದೆ.
ಮಂಗಳೂರಿನ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಿಂದ ಹೊರಡುವ ಬಸ್​ಗಳನ್ನು ಸ್ಥಗಿತಗೊಳಿಸಲಾಗಿದೆ. ಮಂಗಳೂರು-ಕಾಸರಗೋಡು ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರಿಗೆ ಯಾವುದೇ ಕೇರಳ ಸಾರಿಗೆ ಬಸ್​ಗಳು ಆಗಮಿಸುತ್ತಿಲ್ಲ.
ಉಳಿದಂತೆ ಮಂಗಳೂರಿನಲ್ಲೂ ಭಾರತ್​ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್​ ಸಂಚಾರ ಆರಂಭವಾಗಿದೆ. ಜನಜೀವನವು ಸಾಗುತ್ತಿದ್ದು, ವ್ಯಾಪಾರ ವಹಿವಾಡುಗಳು ನಡೆಯುತ್ತಿವೆ. ಆದರೆ, ಬಂದ್​ ಭೀತಿಯಿಂದ ದೂರದ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಮುಂಜಾಗ್ರತ ಕ್ರಮವಾಗಿ ಬಿಗಿ ಪೊಲೀಸ್​ ಬಂದೋಬಸ್ತ್​ ಕಲ್ಪಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − six =
Remember me
