ಮಂಗಳೂರು:ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ಅನ್ಯಕೋಮಿನ ಯುವಕ-ಯುವತಿ ಚಲಿಸುತ್ತಿದ್ದ ಬಸ್ ಮೇಲೆ ಹಿಂದು ಸಂಘಟನೆ ದಾಳಿ ಮಾಡಿರುವ ಆರೋಪ ಕೇಳಿಬಂದಿದೆ.
ಮಂಗಳೂರಿನ ಪಂಪ್ ವೆಲ್ ಬಳಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ ಎನ್ನಲಾಗಿದೆ. ಯುವಕ-ಯುವತಿ ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ ಹೊರಟಿದ್ದರು. ಯುವಕನಿಗೆ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು, ಯುವತಿಗೂ ಥಳಿಸಿದ್ದಾರೆನ್ನಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿರಿ:ಕರೊನಾ ಬಂದಿದ್ದಕ್ಕೆ ಇಡೀ ಗ್ರಾಮಸ್ಥರು ಈ ಹುಡುಗಿ ಜತೆ ನಡೆದುಕೊಂಡ ರೀತಿ ನಾಚಿಕೆ ಹುಟ್ಟಿಸುವಂತಿದೆ..!
ಈ ಸಂಬಂಧ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವಾರ ವಿದ್ಯಾದಾಯಿನಿ ಸರ್ಕಲ್ ಬಳಿ ಅನ್ಯಕೋಮಿನ ಜೋಡಿ ಮೇಲೆ ದಾಳಿ ಮಾಡಲಾಗಿತ್ತು. ಕಳೆದ ಮೂರು ತಿಂಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ದಾಳಿಯಾಗಿರುವ ಬಗ್ಗೆ ವರದಿಯಾಗಿದೆ.
ಮಂಗಳೂರು, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಸೇರಿದಂತೆ ವಿವಿಧ ಕಡೆ ದಾಳಿಯಾಗಿವೆ. ಕಳೆದ ಫೆಬ್ರವರಿಯ್ಲಲಿ ಎಕ್ಕಾರು ಕಲ್ಲು ಕೋರೆ ಬಳಿ ಕೂಡ ದಾಳಿ ಮಾಡಲಾಗಿತ್ತು. ಅರೆಬೆತ್ತಲಾಗಿ ಕಾಣಿಸಿಕೊಂಡಿದ್ದ ಯುವಕ-ಯುವತಿಯರನ್ನು ಥಳಿಸಿ ಬಜೆಪೆ ಪೊಲೀಸರಿಗೆ ಸಂಘಟನೆ ನೀಡಿದ್ದರು.(ದಿಗ್ವಿಜಯ ನ್ಯೂಸ್​)
ಇಂಥವರೂ ಇರ್ತಾರಾ? ವಿದ್ಯಾರ್ಥಿಗಳ ಹಿತ ಕಾಯಬೇಕಿದ್ದ ಮಹಿಳಾ ಪ್ರಾಂಶುಪಾಲರಿಂದ ತಲೆತಗ್ಗಿಸೋ ಕೃತ್ಯ!

ನಯನತಾರಾ-ಉದಯನಿಧಿ ಸ್ಟಾಲಿನ್​ ನಡುವೆ ರಹಸ್ಯ ಸಂಬಂಧ? ಹಿರಿಯ ನಟನ ಸ್ಫೋಟಕ ಹೇಳಿಕೆ!

ಬಿಗ್​ಬಾಸ್​ಗೆ ಚಂದ್ರಚೂಡ್ ಎಂಟ್ರಿ; ಐದನೇ ವಾರಕ್ಕೆ ವೈಲ್ಡ್ ಕಾರ್ಡ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
