ಬೆಂಗಳೂರು:ಪ್ರ‌ಧಾನಿ ನರೇಂದ್ರ ಮೋದಿ ಅವರು ಸೆ.2 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕರಾವಳಿ ಪ್ರದೇಶವು ಕಮಲಪಡೆಯ ಭದ್ರಕೋಟೆ ಎಂದು ಬಿಂಬಿತವಾಗಿರುವ ಕಾರಣ ಮೋದಿಯವರ ಕಾರ್ಯಕ್ರಮಕ್ಕೆ ಬಿಜೆಪಿ ವಿಶೇಷ ಆಸಕ್ತಿ ವಹಿಸಿದೆ.
ಸರ್ಕಾರಿ ಕಾರ್ಯಕ್ರಮವೇ ಆಗಿದ್ದರೂ ಮುಂಬರುವ ಚುನಾವಣೆ ದೃಷ್ಟಿಯಿಂದ ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ, ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ಹೆಚ್ಚಿನ ಲಕ್ಷ್ಯ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್​ಗೆ ಕಾರ್ಯಕ್ರಮದ ಮೇಲುಸ್ತುವಾರಿ ಹೊಣೆ‌ ಒಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಸಮಾವೇಶಕ್ಕೆ ಕರಾವಳಿ ಜಿಲ್ಲೆಗಳಲ್ಲೇ ಇತ್ತೀಚಿನ‌ ದಿನಗಳಲ್ಲಿ ಸೇರದಷ್ಟು ಜನರನ್ನು ಸೇರಿಸಲಾಗುತ್ತಿದೆ. ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿರುವುದರಿಂದ ಸ್ವಯಂಪ್ರೇರಣೆಯಿಂದಲೇ ಜನರು ಸಮಾವೇಶಕ್ಕೆ ಆಗಮಿಸಲಿದ್ದಾರೆ. ಸುಮಾರು ಒಂದು ಲಕ್ಷ ಜನರು ಮೋದಿ ಭಾಷಣ ಕೇಳುವುದಕ್ಕೆ ಆಗಮಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
2000 ಬಸ್ಸಮಾವೇಶ ಸ್ಥಳಕ್ಕೆ ಉಭಯ ಜಿಲ್ಲೆಗಳಿಂದ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಕರೆತರುವುದಕ್ಕೆ ಸುಮಾರು 2000 ಬಸ್ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಸಮರ್ಪಕ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ‌ಕಾರ್ಯಕ್ರಮದ ಬಳಿಕ ಬಿಜೆಪಿ ಕೋರ್ ಕಮಿಟಿ ಸಭೆಯೂ ಸೇರಿದಂತೆ ಸುಮಾರು ಒಂದು ಗಂಟೆ ಕಾಲ ಪಕ್ಷದ ನಾಯಕರ ಜತೆಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಪರಶುರಾಮ ಪುತ್ಥಳಿಪ್ರಧಾನಿ ಮೋದಿಯವರಿಗೆ ಈ ಕಾರ್ಯಕ್ರಮದ ಸ್ಮರಣಾರ್ಥವಾಗಿ ತುಳುನಾಡು ನಿರ್ಮಾತೃ ಪರಶುರಾಮನ ಭವ್ಯ ಪುತ್ಥಳಿಯನ್ನು ಉಡುಗೊರೆ ರೂಪದಲ್ಲಿ ಕೊಡಲು ನಿಶ್ಚಯಿಸಲಾಗಿದೆ. ಈ ಪುತ್ಥಳಿಯನ್ನು ವಿಶೇಷ ಆಸ್ಥೆಯಿಂದ ಸಿದ್ಧಪಡಿಸುವುದಕ್ಕೆ ಸಚಿವ ಸುನಿಲ್ ಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ. ಕರಾವಳಿಯ ಇತಿಹಾಸದಲ್ಲಿ ನಭೂತೋ ಎಂಬಂತೆ ಕಾರ್ಯಕ್ರಮ ಯಶಸ್ವಿಗೊಳಿಸಲು ಕೇಸರಿಪಡೆ ಈಗ ಸಜ್ಜಾಗಿದೆ.
ಒಂದು ಲಕ್ಷ ಜನರ ನಿರೀಕ್ಷೆಪ್ರಧಾನಿ ನರೇಂದ್ರ‌ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಭರದ ಸಿದ್ಧತೆ ನಡೆಯುತ್ತಿದ್ದು ಒಂದು ಲಕ್ಷಕ್ಕೂ ಮೇಲ್ಪಟ್ಟು ಜನರು ಸೇರುವ ನಿರೀಕ್ಷೆಯಿದೆ ಎಂದು ಇಂಧನ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.
ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯ ಬಳಿಕ ಈ ಸಮಾವೇಶ ನಡೆಯಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷರ ಜತೆಗೆ ಈಗಾಗಲೇ ಸ್ಥಳ ಪರಿಶೀಲನೆ ಹಾಗೂ ಸಭೆ ನಡೆಸಲಾಗಿದೆ ಎಂದಿದ್ದಾರೆ.
ಕುತೂಹಲಕ್ಕೆ ತೆರೆ ಎಳೆದ ನಟಿ ರಮ್ಯಾ: ಮತ್ತೆ ಸಿನಿಮಾಗೆ ಎಂಟ್ರಿ ಕೊಟ್ಟ ಮೋಹಕ ತಾರೆ, ಆದ್ರೆ ನಟಿಯಾಗಿ ಅಲ್ಲ

ಕೆಲವೇ ದಿನಗಳಲ್ಲಿ ಮದ್ವೆ ಆಗಬೇಕಿದ್ದ ಯುವತಿ ದುರಂತ ಸಾವು: ಭಾವಿ ಪತಿಯ ಬಂಧನ, ಮೊಬೈಲ್​ನಲ್ಲಿತ್ತು ಸಾವಿನ ರಹಸ್ಯ

ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾದ್ರೂ ಮಂಡ್ಯಕ್ಕೆ ಬಾರದ ಸಂಸದೆ ಸುಮಲತಾ ವಿರುದ್ಧ ಜನಾಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 13 =
Remember me
