ಕಲಬುರ್ಗಿ:ರಾಜ್ಯ ವಿಧಾನಸಭೆ ಚುನಾವಣೆಯ ಕಾವು ಮತದಾನದ ದಿನ ಹತ್ತಿರವಾಗುತ್ತಿದ್ದಂತೆ ಹೆಚ್ಚಾಗುತ್ತಿದ್ದು ಕಾಂಗ್ರೆಸ್​ ಹಾಗೂ ಬಿಜೆಪಿ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿವೆ.
ಇನ್ನು ರಾಜ್ಯದ ಹೈವೋಲ್ಟೇಜ್​ ಕ್ಷೇತ್ರಗಳಲ್ಲಿ ಒಂದಾದ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಮಾಜಿ ಸಚಿವ, ಹಾಲಿ ಶಾಸಕ ಪ್ರಿಯಾಂಕ ಖರ್ಗೆ ಕಣಕ್ಕಿಳಿದಿದ್ದು ಬಿಜೆಪಿಯಿಂದ ಮಣಿಕಂಠ ರಾಥೋಡ್​​​ ಎಂಬುವವರಿಗೆ ಟಿಕೆಟ್​ ಕೊಡಲಾಗಿದೆ.
ಇನ್ನು ಮಣಿಕಂಠ ರಾಥೋಡ್​ ಖರ್ಗೆ ಕುಟುಂಬದ ಕುರಿತು ಮಾತನಾಡಿದ್ದಾನೆ ಎನ್ನಲಾದ ಆಡಿಯೋ ರಾಜ್ಯ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದು ಈ ಕುರಿತು ಸ್ವತಃ ಬಿಜೆಪಿ ಅಭ್ಯರ್ಥಿ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:ಖರ್ಗೆ ಕುಟುಂಬಕ್ಕೆ ಬೆದರಿಕೆ ಆರೋಪ; ಬಿಜೆಪಿ ವಿರುದ್ಧ ಕಾಂಗ್ರೆಸ್​ ಟ್ವೀಟಾಸ್ತ್ರ
ಇನ್ನು ಈ ಕುರಿತು ಚಿತ್ತಾಪುರದಲ್ಲಿ ಮಾತನಾಡಿದ ಮಣಿಕಂಠ ರಾಥೋಡ್​ ಯಾರೋ ನಕಲಿ ಆಡಿಯೋ ಸೃಷ್ಟಿಸಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್​ ನಾಯಕರು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದ್ದಾರೆ.
ಸೋಲುವ ಭೀತಿತಯಿಂದ ನನ್ನ ವಿರುದ್ಧ ಕಾಂಗ್ರೆಸ್​ ನಾಯಕರು ಈ ರೀತಿ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 11 =
Remember me
