ಮಹದೇವಪುರ:ಪ್ರಧಾನಿ ನರೇಂದ್ರ ಮೋದಿಯವರ ವರ್ಚುವಲ್ ಸಂವಾದ ಕಾರ್ಯಕ್ರಮದ ನೇರ ಪ್ರಸಾರ ವನ್ನು ಮಹದೇವಪುರ ಕ್ಷೇತ್ರದ ಮಾರತ್ತಹಳ್ಳಿಯಲ್ಲಿನ ನಗರ ಮಂಡಲದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು. ಕ್ಷೇತ್ರದ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಹಾಗೂ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡು ಮೋದಿ ಅವರ ಭಾಷಣ ಆಲಿಸಿದರು. ನಂತರ ಕ್ಷೇತ್ರದ ಭೋಗನಹಳ್ಳಿ, ಪಣತ್ತೂರು, ಪಣತ್ತೂರು ದಿಣ್ಣೆ, ಮುನ್ನೆಕೋಳಾಲ, ಶಿರಡಿ ಸಾಯಿ ಲೇಔಟ್, ಕುಂದಲಹಳ್ಳಿ, ಸಿದ್ದಾಪುರ, ರಾಮಗೊಂಡನಹಳ್ಳಿ, ವೈಟ್‌ಫೀಲ್ಡ್, ನಲ್ಲೂರಹಳ್ಳಿ ಗ್ರಾಮಗಳಲ್ಲಿ ಸಾವಿರಾರು ಬೆಂಬಲಿಗರೊಂದಿಗೆ ಚುನಾವಣಾ ಪ್ರಚಾರ ನಡೆಸಿದರು.
ಪ್ರಚಾರ ವೇಳೆ ಮಾತನಾಡಿದ ಮಂಜುಳಾ ಲಿಂಬಾವಳಿ, ಪ್ರಧಾನಿ ಮೋದಿಯವರ ಕಾರ್ಯವೈಖರಿಯಿಂದ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಕಳೆದ ಎಲೆಕ್ಷನ್‌ನಿಂದಲೂ ನಾನು ಪತಿಯ ಜತೆ ಕ್ಷೇತ್ರವ್ಯಾಪಿ ಸಂಚರಿಸಿ ಪ್ರಚಾರದಲ್ಲಿ ತೊಡಗಿದ್ದೇನೆ ಎಂದು ಹೇಳಿದರು.
ಕ್ಷೇತ್ರದ ಚುನಾವಣಾ ಉಸ್ತುವಾರಿ ಸಚ್ಚಿದಾನಂದ ಮೂರ್ತಿ, ಚುನಾವಣಾ ಸಂಚಾಲಕ ರಾಜಾರೆಡ್ಡಿ, ನಗರ ಮಂಡಲ ಅಧ್ಯಕ್ಷ ಮನೋಹರ್ ರೆಡ್ಡಿ, ಗ್ರಾಮಾಂತರ ಮಂಡಲ ಅಧ್ಯಕ್ಷ ಬಿ. ಎನ್. ನಟರಾಜ್, ಮುಖಂಡರು ಜಯಚಂದ್ರ ರೆಡ್ಡಿ, ವೆಂಕಟಸ್ವಾಮಿ ರೆಡ್ಡಿ, ನವೀನ್, ನಾಗೇಶ್, ಲೋಕೇಶ್, ಸೇರಿ ಹಲವು ಮುಖಂಡರು ಹಾಗೂ ಕಾರ್ಯಕರ್ತರಿದ್ದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eleven + nine =
Remember me
