ಮಹದೇವಪುರ:ಕ್ಷೇತ್ರದಲ್ಲಿ ಅಭಿವೃದ್ಧಿಯೊಂದಿಗೆ ಶಾಂತಿ, ನೆಮ್ಮದಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಕ್ಷೇತ್ರದ ವಿವಿಧೆಡೆ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ್ದ ಸಭೆಗಳಲ್ಲಿ ಪಾಲ್ಗೊಂಡು ಮಾತನಾಡಿದರು. ಕ್ಷೇತ್ರದಲ್ಲಿ ಅನ್ಯ ಭಾಷಿಕರು ಸೇರಿ 6 ಲಕ್ಷಕ್ಕೂ ಹೆಚ್ಚು ಮತದಾರರು ಇದ್ದಾರೆ. ನಿತ್ಯ 10 ಲಕ್ಷಕ್ಕೂ ಹೆಚ್ಚು ಮಂದಿ ಕೆಲಸಕ್ಕಾಗಿ ಬಂದು ಹೋಗುತ್ತಿದ್ದಾರೆ. 15 ವರ್ಷದಿಂದ ಜಾತಿ ಜಾತಿಗಳ ನಡುವೆ ಯಾವುದೇ ರೀತಿಯ ವೈಮನಸ್ಸು ಉಂಟಾಗದಂತೆ ಅಭಿವೃದ್ಧಿಯೊಂದಿಗೆ ಸಮಾನತೆ, ಶಾಂತಿ ಸುವ್ಯವಸ್ಥೆಯನ್ನು ಪತಿ ಅರವಿಂದ ಲಿಂಬಾವಳಿ ಕಾಪಾಡಿ ಕೊಂಡು ಬಂದಿದ್ದಾರೆ. ಮುಂದೆಯೂ ಇದೇ ವಾತಾವರಣ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಬೇಕೆಂದು ಕೋರಿದರು.
ಮುಂದುವರಿದ ಪಕ್ಷ ಸೇರ್ಪಡೆ: ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಮುಂದುವರಿದಿದೆ. ಶನಿವಾರ ಕೂಡ ಮಾರತಹಳ್ಳಿಯ ಶಾಸಕರ ಕಚೇರಿಯಲ್ಲಿ ಕೆಪಿಸಿಸಿ ಮಾಧ್ಯಮ ವಕ್ತಾರ, ಎಸ್ಸಿ ಘಟಕದ ರಾಜ್ಯ ಸಂಚಾಲಕ, ವೈ.ಲಕ್ಷ್ಮೀಪ್ರಸಾದ್, ವಿಜಯೇಂದ್ರ ಮಣಿ, ಪ್ರೇಮ್‌ಸಾಗರ್, ಚಂದ್ರಶೇಖರ್, ಸುಕೂರ್, ನಾಸೀರ್ ಇನ್ನಿತರ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 2 =
Remember me
