ವಿಜಯವಾಣಿ ಸುದ್ದಿಜಾಲ ಬೆಂಗಳೂರು
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್​ನಲ್ಲಿ ಚುರುಕಿನ ಚಟುವಟಿಕೆ ನಡೆಯುತ್ತಿವೆ. ಟಿಕೆಟ್ ಆಕಾಂಕ್ಷಿಗಳಲ್ಲಿ ಪೈಪೋಟಿ ಶುರುವಾಗಿದೆ. ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಹೈವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸಿದೆ. ಮೂರೂ ಪಕ್ಷಗಳಿಗೂ ಈ ಕ್ಷೇತ್ರದ ಟಿಕೆಟ್ ತಲೆನೋವು ಉಂಟು ಮಾಡಿದೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ದೊಡ್ಡ ಮಟ್ಟದ ಫಸಲು ಬಂದಿರುವುದರಿಂದ ಉಪ ಚುನಾವಣೆಯಲ್ಲಿ ಮೈತ್ರಿ ಮತ್ತಷ್ಟು ಗಟ್ಟಿಗೊಳಿಸುವ ತಂತ್ರಗಾರಿಕೆ ನಡೆಯುತ್ತಿದೆ. ಕಾಂಗ್ರೆಸ್ 136 ಸ್ಥಾನ ಗೆದ್ದು ಸ್ಪಷ್ಟ ಬಹುಮತದಿಂದ ಅಧಿಕಾರ ನಡೆಸುತ್ತಿದ್ದರೂ ಉಪ ಚುನಾವಣೆಯನ್ನು ಮೂರೂ ಪಕ್ಷಗಳು ಸವಾಲಾಗಿ ಸ್ವೀಕರಿಸಿವೆ. ಹೀಗಾಗಿ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳು ಜಿದ್ದಾಜಿದ್ದಿನ ಕಣವಾಗಿ ಮಾರ್ಪಡಲಿವೆ. ಈ ಮೂರೂ ಕ್ಷೇತ್ರಗಳ ಶಾಸಕರು ಸಂಸದರಾಗಿ ಆಯ್ಕೆಯಾಗಿರುವುದರಿಂದ ಉಪ ಚುನಾವಣೆ ನಡೆಯಲಿದ್ದು, ಆಯಾ ಕ್ಷೇತ್ರದಿಂದ ಗೆದ್ದಿದ್ದ ಸಂಸದರಿಗೂ ತಮ್ಮ ಕ್ಷೇತ್ರ ಉಳಿಸಿಕೊಳ್ಳುವುದು ಸವಾಲಿನ ಸಂಗತಿಯಾಗಿದೆ.
ಚೆಕ್​ವೆುೕಟ್ ಲೆಕ್ಕಾಚಾರ:ಚನ್ನಪಟ್ಟಣದಲ್ಲಿ ಜೆಡಿಎಸ್ ಪ್ರಬಲವಾಗಿದೆ. ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಅಷ್ಟಾಗಿ ಇಲ್ಲದೇ ಇದ್ದರೂ ಮೈತ್ರಿಯಿಂದ ಚುನಾವಣೆ ಎದುರಿಸಿ ಕಾಂಗ್ರೆಸ್​ಗೆ ಚೆಕ್​ವೆುೕಟ್ ಕೊಡಬೇಕೆಂಬುದು ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ. ಕಾರಣ ಮೈತ್ರಿಯಲ್ಲಿ ಸಣ್ಣ ಅಪಸ್ವರವೂ ಬಾರದಂತೆ ಕಟ್ಟೆಚ್ಚರವಹಿಸಲು ದೆಹಲಿ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಗೌಡರ ಸಲಹೆ ಪಡೆದ ಬಿಜೆಪಿ:ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸಲಹೆಯನ್ನು ಅಕ್ಷರಶಃ ಪಾಲಿಸಿದ ಬಿಜೆಪಿ ಉಪ ಚುನಾವಣೆಯಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ದೇವೇಗೌಡರ ಜತೆ ಒಂದು ಸುತ್ತಿನ ಮಾತುಕತೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ದೇವೇಗೌಡರು ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಉಳಿಸಿಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಸುಳಿವು ಸಿಕ್ಕಿದ್ದರಿಂದಲೇ ಸಿ.ಪಿ.ಯೋಗೇಶ್ವರ್ ಮೈತ್ರಿ ಅಭ್ಯರ್ಥಿಯಾಗಲು ಪಟ್ಟುಹಿಡಿದಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಒಗ್ಗಟ್ಟಿನ ಮಂತ್ರ, ಕಾಂಗ್ರೆಸ್ ಹಣಿಯಲು ತಂತ್ರ: ಮೈತ್ರಿ ಪಕ್ಷಗಳು ಕಾಂಗ್ರೆಸ್ ಹಣಿಯಲು ಯಾವುದೇ ತ್ಯಾಗಕ್ಕೂ ಸಿದ್ಧವಾಗಿವೆ. ಮೈತ್ರಿಯನ್ನು ಮತ್ತಷ್ಟು ಗಟ್ಟಿಗೊಳಿಸಿ ಕಾಂಗ್ರೆಸ್​ಗೆ ಚಳ್ಳೆಹಣ್ಣು ತಿನ್ನಿಸಲು ಒಗ್ಗಟ್ಟಿನ ಮಂತ್ರ ಜಪಿಸುತ್ತಿವೆ. ಇದರ ಫಲವಾಗಿ ಈ ಬಾರಿ ಉಪ ಚುನಾವಣೆ ಕೂಡ ಜಿದ್ದಾಜಿದ್ದಿನ ಕಣವಾಗಲಿವೆ.
ಒಮ್ಮತದ ಅಭ್ಯರ್ಥಿ ಕಣಕ್ಕೆ :ಒಳಗೊಳಗೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ಅವುಗಳನ್ನು ಬದಿಗೊತ್ತಿ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ವನಿ ಸಲಾಗಿದೆ. ಚನ್ನಪಟ್ಟಣ ಮಾತ್ರವಲ್ಲದೆ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ ಕೂಡ ಜೆಡಿಎಸ್ ಎಲ್ಲ ಶಕ್ತಿ ಹಾಗೂ ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಂತ್ರಗಾರಿಕೆಯನ್ನು ಬಳಸಿಕೊಳ್ಳಲು ಹೈಕಮಾಂಡ್ ನಿರ್ಧರಿಸಿದೆ. ಹಾಗಾಗಿ ಮೂರೂ ಕ್ಷೇತ್ರಗಳ ಟಿಕೆಟ್ ವಿಚಾರದಲ್ಲಿ ಕುಮಾರಸ್ವಾಮಿ ಕೂಡ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ ಎಂದೇ ಹೇಳಲಾಗುತ್ತಿದೆ.
ಡಿಸೆಂಬರ್‌ನಲ್ಲಿ ಗಗನಯಾನ ಮೊದಲ ಪರೀಕ್ಷಾರ್ಥ ಉಡಾವಣೆ: ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್

ಜಿಪಂ, ತಾಪಂ ಚುನಾವಣೆಗೆ ತಯಾರಿ
ಬೆಂಗಳೂರು: ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗೆ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ ಬೀಸಿದೆ. ಇದರ ಬೆನ್ನಲ್ಲೇ ಜೆಡಿಎಸ್ ಈ ಚುನಾವಣೆಗೆ ಪೂರ್ವ ತಯಾರಿ ಆರಂಭಿಸಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಕ್ಷೇತ್ರ ಪುನರ್ವಿಂಗಡಣೆಯಾಗಿದ್ದು, ಮೀಸಲು ನಿಗದಿ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳೂ ಗರಿಗೆದರಿವೆ. ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ಸಭೆ ನಡೆಸಲು ನಿರ್ಧರಿಸಿದೆ. ಆ.18 ರಂದು ಬೆಳಗ್ಗೆ 11ಕ್ಕೆ ಜೆ.ಪಿ.ಭವನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಿ ಈ ಚುನಾವಣೆ ಬಗ್ಗೆ ರ್ಚಚಿಸಲಾಗುತ್ತದೆ. ಜತೆಗೆ ಪಕ್ಷದ ಸದಸ್ಯತ್ವ ಅಭಿಯಾನ, ಪಕ್ಷ ಸಂಘಟನೆ ಕುರಿತು ಸಮಾಲೋಚನೆ ನಡೆಸಲಾಗುತ್ತದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:four × five =
Remember me
